ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರು ಶೋ ರೂಮ್ ನಲ್ಲಿದ್ದ ಕಾರುಗಳು ಸುಟ್ಟು ಭಸ್ಮವಾಗಿರುವ ಘಟನೆ ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿರುವ ಹುಂಡೈ ಕಾರು ಶೋ ರೂಮ್ ನಲ್ಲಿ ನಡೆದಿದೆ.
ಇದನ್ನೂ ಓದಿ; ರೈತರೇ ಗಮನಿಸಿ; ಈ ದಿನ ಬಿಡುಗಡೆಯಾಗಲಿದೆ ಪಿಎಂ ಕಿಸಾನ್ ಯೋಜನೆಯ 16 ನೇ ಕಂತು

ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ 2 ಗಂಟೆಗಳ ಕಾಲ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಬೆಂಕಿಯ ಜ್ವಾಲೆ ಅಕ್ಕಪಕ್ಕದ ಕಟ್ಟಡಗಳಿಗೂ ವ್ಯಾಪಿಸಿದ್ದರಿಂದ ಟಾಟಾ ಶೋರೂಂ ಕೂಡ ಧಗಧಗಿಸಿದೆ.
ಇದನ್ನೂ ಓದಿ; ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ; ಹೆಸರು ನೋಂದಾಯಿಸಿಕೊಳ್ಳಲು ಇಲ್ಲಿದೆ ವಿವರ
ಶಿವಮೊಗ್ಗದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿಕ್ಕಮಗಳೂರು: ಕಾಡಾನೆ ಬಳಿಕ ಕಾಡುಕೋಣಗಳ ಕಾಟ | ಜೀವ ಭಯದಲ್ಲಿ ಗ್ರಾಮಸ್ಥರು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ ಕೆಲ ತಿಂಗಳುಗಳಿಂದ ಜಿಲ್ಲೆಯಾದ್ಯಂತ ಕಾಡಾನೆ ಹಾವಳಿ ಜೋರಾಗಿದ್ದು ಇದರಿಂದ ತೋಟದ ಕಾರ್ಮಿಕರು ಕೆಲಸಕ್ಕೆ ಹೋಗಲು ಭಯಪಡುತ್ತಿರುವ ಬೆನ್ನಲ್ಲೇ ಇದೀಗ ಕಾಡುಕೋಣಗಳ ಹಿಂಡೊಂದು ಚಿಕ್ಕಮಗಳೂರು ತಾಲೂಕಿನ ಬೆಟ್ಟದಮರಡಿ ಗ್ರಾಮದಲ್ಲಿ ಕಂಡುಬಂದಿದೆ.
ಸುಮಾರು ಹದಿನೈದಕ್ಕೂ ಹೆಚ್ಚು ಕಾಡುಕೋಣಗಳು ಕಂಡುಬಂದಿದ್ದು ಗ್ರಾಮಸ್ಥರು ಜೀವ ಭಯದಲ್ಲಿ ಕೆಲಸಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಕಾಡಾನೆ ದಾಳಿಯಿಂದ ಕಂಗೆಟ್ಟ ಜನರು ಮನೆಯಿಂದ ಹೊರಬರಲು ಹೆದರುವ ಸ್ಥಿತಿ ನಿರ್ಮಾಣವಾಗಿತ್ತು ಇದರ ಜೊತೆಗೆ ಕಾಡುಕೋಣಗಳು ನಾಡಿನತ್ತ ಹೆಜ್ಜೆ ಹಾಕಲಾರಂಭಿಸಿದೆ.
ಮೂಡಿಗೆರೆ: ಮನೆ ಮಾಲೀಕನಿಗೆ ಖಾರದಪುಡಿ ಎರಚಿ ಲಕ್ಷಾಂತರ ಮೌಲ್ಯದ ನಗದು ದರೋಡೆ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ನಾಲ್ವರು ಅಪರಿಚಿತ ಯುವಕರ ತಂಡವೊಂದು ಮನೆ ಮಾಲಿಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಲಾಂಗ್ ಇಟ್ಟು ಮನೆಯಲ್ಲಿದ್ದ ಸುಮಾರು 5 ಲಕ್ಷ ನಗದು, 30 ಗ್ರಾಂ ಮಾಂಗಲ್ಯ ಸರವನ್ನ ಹೊತ್ತೊಯ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಳಿಗನಾಡು ಹೆಬ್ಬಾರಟ್ಟಿ ಗ್ರಾಮದಲ್ಲಿ ಗುರುವಾರ ರಾತ್ರಿ 8 ಗಂಟೆಗೆ ನಡೆದಿದೆ.
ಹೆಬ್ಬಾರಟ್ಟಿ ಅನಂತ ಹೆಬ್ಬಾರ್ ಎಂಬುವರ ಮನೆಯಲ್ಲಿ ದರೋಡೆ ನಡೆದಿದ್ದು, ನಾಲ್ವರು ಅಪರಿಚಿತ ಯುವಕರ ತಂಡ ಮನೆಯ ಮೇಲೆ ದಾಳಿ ನಡೆಸಿ ಮನೆ ಮಾಲೀಕನ ಕುತ್ತಿಗೆಗೆ ಹರಿತವಾದ ಲಾಂಗ್ ಇಟ್ಟು ಬೆದರಿಸಿ ಮನೆಯಲ್ಲಿದ್ದ ಸುಮಾರು ಐದು ಲಕ್ಷ ನಗದು ಸೇರಿದಂತೆ ಚಿನ್ನಾಭರಣಗಳನ್ನು ದರೋಡೆ ಮಾಡಿದ್ದಾರೆ. ಈ ವೇಳೆ ತಡೆಯಲು ಬಂದ ಕಾರ್ಮಿಕ ಮಾಣಿ ಭಟ್ಟ ಎಂಬವರ ಕೈಗೆ ಹರಿತವಾದ ಆಯುಧದಿಂದ ಕೈ ಕಡಿದಿದ್ದಾರೆ. ಈ ವೇಳೆ ಕಾರ್ಮಿಕ ಬೊಬ್ಬೆ ಹೊಡೆದ ಪರಿಣಾಮ ಅಕ್ಕಪಕ್ಕದ ಜನ ಸೇರುತ್ತಿದ್ದಂತೆ ಮೂವರು ಕಾರಿನಲ್ಲಿ ಪರಾರಿಯಾಗಿದ್ದಾರೆ. ಓರ್ವ ಅರಮನೆ ತಲಗೂರು ಎಂಬ ಗ್ರಾಮದ ಅರಣ್ಯದಲ್ಲಿ ಅವಿತು ಕೂತಿದ್ದು, ಸ್ಥಳೀಯರು ಸೇರಿ ಅರಣ್ಯ ಪ್ರದೇಶದಲ್ಲಿ ಹುಡುಕಾಡಿದಾಗ ಓರ್ವ ಪತ್ತೆಯಾಗಿದ್ದು, ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.












