
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ವಿಂಧನ್ ಎಂಬುವವರ ಮನೆ ಮೇಲೆ ಗುಂಡಿನ ದಾಳಿ (ಫೈರಿಂಗ್) ನಡೆದಿದ್ದು, ಅವರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಿಜೆಪಿ SC ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಜಿತ್ ಅವರ ತಂಡದಿಂದ ಈ ಫೈರಿಂಗ್ ನಡೆದಿದೆ ಎನ್ನಲಾಗಿದೆ. ಆರೋಪಿಗಳು ಶಿಕಾರಿಗೆ ಬಂದಿದ್ದರೋ ಅಥವಾ ಕೊಲೆ ಮಾಡುವ ಉದ್ದೇಶದಿಂದ ಬಂದಿದ್ದರೋ ಹಾಗೂ ಈ ಘಟನೆಯ ಹಿಂದೆ ವೈಷಮ್ಯ ಇದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.
ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸದಂತೆ ವಿಂಧನ್ ಅವರಿಗೆ ರಾಜಕಾರಣಿಗಳಿಂದ ಒತ್ತಡ ಹೇರಲಾಗಿತ್ತು. ಆದರೆ, ಪ್ರಕರಣ ದಾಖಲಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗಳು ಖಡಕ್ ಸೂಚನೆ ನೀಡಿದ ಬಳಿಕ ಎಫ್ಐಆರ್ (FIR) ದಾಖಲಾಗಿದೆ. ಬಳಿಕ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.














