ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಚುಚೇಗುಡ್ಡ ಮೀಸಲು ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲು ತಾಪ ಹೆಚ್ಚಾಗುತ್ತಿದ್ದು ಈ ಕಾರಣದಿಂದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತದೆ ಎನ್ನಲಾಗುತ್ತಿದೆ. ಕಾಫಿನಾಡಿನ ಕೋರ್ಟ್ ಹಿಂಬಾಗದಲ್ಲಿರುವ ಚುರ್ಚೆಗುಡ್ಡ ಮೀಸಲು ಅರಣ್ಯ ಪ್ರದೇಶದಲ್ಲಿ ತೀವ್ರ ಬಿಸಿಲ ಧಗೆಯಿಂದ 15 ಎಕರೆಗೂ ಅಧಿಕ ಮೀಸಲು ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.

ಘಟನಾ ಸ್ಥಳಕ್ಕೆ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!
















