ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಬಜರಂಗದಳದ ಮಾಜಿ ಸಂಚಾಲಕ ಹಾಗೂ ಪಟ್ಟಣ ಪಂಚಾಯತ್ ಸದಸ್ಯರಾಗಿದ್ದ ಶ್ರೀನಿವಾಸ್ ಶೆಟ್ಟಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶ್ರೀನಿವಾಸ್ ಶೆಟ್ಟಿ ಅವರ ನಿಧನಕ್ಕೆ ಸ್ಥಳೀಯರು, ಸಂಘಟನೆಯ ಮುಖಂಡರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಸಾರ್ವಜನಿಕ ಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದು, ಪಟ್ಟಣ ಪಂಚಾಯತ್ ಸದಸ್ಯರಾಗಿ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ.












