ಬೆಂಗಳೂರು/ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೂಡಿಗೆರೆಯ ಮಾಜಿ ಶಾಸಕರಾದ ಎಂ.ಪಿ. ಕುಮಾರಸ್ವಾಮಿ ಮತ್ತು ಶಿರಹಟ್ಟಿಯ ರಾಮಪ್ಪ ಲಮಾಣಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲು ತೀರ್ಮಾನಿಸಿದ್ದಾರೆ.
ಇದನ್ನೂ ಓದಿ; ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾಜಿ ಶಾಸಕರಾದ ಎಂ.ಪಿ. ಕುಮಾರಸ್ವಾಮಿ ಮತ್ತು ರಾಮಪ್ಪ ಲಮಾಣಿ ಅವರು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಗುಡ್ ಬೈ ಹೇಳಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದರು. ಇದೀಗ ಈ ಇಬ್ಬರು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ; ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
ಬಿಜೆಪಿ ಶಾಸಕರಾಗಿದ್ದ ಕುಮಾರಸ್ವಾಮಿ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಬಿಜೆಪಿಯಿಂದ ಮುನಿಸಿಕೊಂಡು ಜೆಡಿಎಸ್ ಸೇರಿದ್ದರು ಕುಮಾರಸ್ವಾಮಿ. ಜೆಡಿಎಸ್ ನಿಂದ ಸ್ಪರ್ಧಿಸಿ ಸೋಲುಂಡಿದ್ದರು. ಇದಾದ ಬಳಿಕ ಲೋಕಸಭೆ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ನಿರ್ಧಾರದಿಂದಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಅವರ ಆಪ್ತ ವಲಯದಿಂದ ಮಾಹಿತಿ ಲಭ್ಯ ಆಗಿದೆ. ಇನ್ನು ರಾಮಪ್ಪ ಲಮಾಣಿ ಅವರಿಗೂ ಸಹ ಟಿಕೆಟ್ ನೀಡಲು ನಿರಾಕರಿದ್ದರು. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎನ್ನಲಾಗಿದೆ.
ಚಿಕ್ಕಮಗಳೂರು: ಅಕ್ರಮವಾಗಿ ಸಂಗ್ರಹಿಸಿದ್ದ 7.60 ಲಕ್ಷ ರೂ ಮೌಲ್ಯದ ಪಟಾಕಿ ವಶ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 7.60 ಲಕ್ಷ ರೂ ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ಉಪ ವಿಭಾಗ ಅಧಿಕಾರಿ, ತಹಸಿಲ್ದಾರ್ ಮತ್ತು ಬಸವನಹಳ್ಳಿ ಹಾಗೂ ನಗರ ಠಾಣೆ ಪಿ.ಎಸ್.ಐ, ಸಿಬ್ಬಂದಿ ಹಾಗೂ ಅಗ್ನಿಶಾಮಕ ಇಲಾಖೆಯ ಸಹಯೋಗದೊಂದಿಗೆ ಈ ದಾಳಿ ನಡೆಸಲಾಗಿದೆ.
ಚಿಕ್ಕಮಗಳೂರು ನಗರದ ಮೂರು ಸ್ಥಳಗಳ ಗೋಡೌನ್ ಗಳಲ್ಲಿ ಪರವಾನಿಗೆ ಇಲ್ಲದೆ ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಪಟಾಕಿ ಸಂಗ್ರಹಿಸಲಾಗಿತ್ತು. ಹಾಲೆನಹಳ್ಳಿ ವಿಜಯದುರ್ಗ ದೇವಸ್ಥಾನದ ಒಳಭಾಗದಲ್ಲಿರುವ ಗೋಡೌನ್ ನಲ್ಲಿ 4 ಲಕ್ಷ ಮೌಲ್ಯದ 1000 ಕೆಜಿ ಪಟಾಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಶರೀಫ್ ಗಲ್ಲಿ ಗೋಡೌನ್ 3,50000/- ರೂ ಮೌಲ್ಯದ 684 ಕೆಜಿ ಪಟಾಕಿ ಹಾಗೂ ನಗರದ ಬಿ.ಎಮ್ ರಸ್ತೆ ಮಂಜುನಾಥ ಸ್ವಾಮಿ ಸ್ಟೋರ್ಸ್ ನಲ್ಲಿ 10000/- ರೂ ಮೌಲ್ಯದ 25 ಕೆಜಿ ಪಟಾಕಿ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.












