ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನಲ್ಲಿ 07.07.2025 ಸೋಮವಾರದಂದು ನೂರು ಬೆಡ್ ಆಸ್ಪತ್ರೆಯ ಶಂಕುಸ್ಥಾಪನೆ ನಡೆಯುತ್ತಿದ್ದು, ಈ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರ ಹೆಸರು ಹಾಕದೇ ಚುನಾಯಿತ ಸದಸ್ಯರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಶೃಂಗೇರಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ವೇಣುಗೋಪಾಲ್ ಆರೋಪಿಸಿದ್ದಾರೆ.
ಇದನ್ನೂ ಓದಿ: IBPS PO ನಲ್ಲಿ 5208 ಹುದ್ದೆಗಳ ನೇಮಕ; ಆಕರ್ಷಕ ಸಂಬಳ

ಹಿಂದುಳಿದ ವರ್ಗದಿಂದ ಬಂದು ಸಂವಿಧಾನದ ಚೌಕಟ್ಟಿನಲ್ಲಿಯೇ ಅಧ್ಯಕ್ಷರಾಗಿದ್ದು, ಪಟ್ಟಣ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರ ಹೆಸರುಗಳನ್ನು ಕೈಬಿಟ್ಟು ತಾಲೂಕು ಪಂಚಾಯತಿ ಮತ್ತು ಆರೋಗ್ಯ ಇಲಾಖೆಗಳು ಪತ್ರಿಕೆ ಮುದ್ರಿಸಿವೆ. ಅಲ್ಲದೆ ಕೊಪ್ಪದಲ್ಲಿ ನಡೆಯುವ ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪ ಪಟ್ಟಣ ಪಂಚಾಯಿತಿಯ ಪರಿಶಿಷ್ಟ ಪಂಗಡದಿಂದ ಬಂದತಹ ಮಹಿಳೆಯ ಹೆಸರನ್ನು ಸಹ ಕೈ ಬಿಡಲಾಗಿದೆ.
ಇದನ್ನೆಲ್ಲಾ ಗಮನಿಸಿದರೆ ಇದರ ಹಿಂದೆ ಕಾಂಗ್ರೆಸ್ ನ ದ್ವೇಷದ ರಾಜಕಾರಣ ಕೆಲಸ ಮಾಡಿದಂತಿದೆ. ಈ ಕೂಡಲೇ ಆಗಿರುವ ತಪ್ಪನ್ನು ಸರಿಪಡಿಸದಿದ್ದಲ್ಲಿ ಹೋರಾಟದ ಹಾದಿಯಲ್ಲಿ ಸಾಗಬೇಕಾಗುತ್ತದೆ ಎಂದು ಶೃಂಗೇರಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ವೇಣುಗೋಪಾಲ್ ಎಚ್ಚರಿಸಿದ್ದಾರೆ.
ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ













