ತೀರ್ಥಹಳ್ಳಿ/ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಭಾರತೀಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಇದನ್ನೂ ಓದಿ: ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ?; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

ಕೆಎಸ್ಸಾರ್ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಆರು ಮಂದಿಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ರಿಹಾನ್ (15), ರಾಹಿಲ್ (9), ಫಾತಿಮಾ (76) ಹಾಗೂ ನಾಸಿರ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇನ್ನುಳಿದ ಇಬ್ಬರು ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಸೂರ್ಯನಂತೆ ಹೊಳೆಯಲಿದೆ ಈ ರಾಶಿಯರ ಅದೃಷ್ಟ!; ಯಾವ ರಾಶಿಯವರಿಗೆ ಅದೃಷ್ಟ?
ಚನ್ನಗಿರಿ ತಾಲೂಕಿನ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ಕೆಳಮೆಣಸೆ ಗ್ರಾಮದ ಕುಟುಂಬವು ಮದುವೆ ಮುಗಿಸಿ ಶೃಂಗೇರಿಗೆ ವಾಪಸ್ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಜಾವೀದ್ ಅವರ ಪತ್ನಿ ಮತ್ತು ಮಗಳು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಅಂಚೆ ಇಲಾಖೆ ಜೊತೆಗೂಡಿ ಸ್ವಂತ ಉದ್ಯಮ ಆರಂಭಿಸಿ; 20,000 ರೂ. ದಿಂದ 80,000 ರೂ.ವರೆಗೆ ಗಳಿಸಿ!













