ಹಾಸನ: (ನ್ಯೂಸ್ ಮಲ್ನಾಡ್ ವರದಿ) ಎರಡು ಪ್ರತ್ಯೇಕ ಘಟನೆಗಳಲ್ಲಿ ಕಾಡಾನೆ ದಾಳಿಯಿಂದಾಗಿ ನಾಲ್ವರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಿನ್ನೆ (ಸೋಮವಾರ) ನಡೆದಿದೆ.
ಇದನ್ನೂ ಓದಿ: ಕೇಂದ್ರದಿಂದ ಕಡಿಮೆ ದರಕ್ಕೆ ಅಕ್ಕಿ!; FSI ಗೆ ಸೂಚಿಸಿದ ಆಹಾರ ಇಲಾಖೆ

ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದ ಕಾಡಾನೆ:
ಬೇಲೂರು ತಾಲೂಕಿನ ಬಿಕ್ಕೋಡು ಎಸ್ಟೇಟ್ ನಲ್ಲಿ ನಿನ್ನೆ ಕಾಫಿ ತೋಟಕ್ಕೆ ತೆರಳುತ್ತಿದ್ದ ಗೀತಾ (40) ಮತ್ತು ಹೇಮ (38) ಎನ್ನುವವರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿ ಸೊಂಡಿಲಿನಿಂದ ಎತ್ತಿ ಬಿಸಾಡಿ, ತುಳಿದು ಗಾಯಗೊಳಿಸಿದೆ ಎನ್ನಲಾಗಿದೆ. ಗೀತಾ ಅವರ ಹೊಟ್ಟೆ ಮತ್ತು ತಲೆಗೆ ತೀವ್ರ ಗಾಯವಾಗಿದ್ದು, ಹೇಮ ಅವರ ಮುಖ ಮತ್ತು ಬಲ ಕೈಗೆ ಗಂಭೀರ ಪೆಟ್ಟಾಗಿದೆ. ಗಾಯಗೊಂಡ ಮಹಿಳೆಯರನ್ನು ತಕ್ಷಣವೇ ಬೇಲೂರು ಸರ್ಕಾರಿ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಪಂಪ್ಸೆಟ್ ಹೊಂದಿರುವವರಿಗೆ ಹೊಸ ಆದೇಶ ಹೊರಡಿಸಿದ ಇಂಧನ ಇಲಾಖೆ; ಏನದು ಹೊಸ ಆದೇಶ, ಇಲ್ಲಿದೆ ನೋಡಿ
ಗರ್ಭಿಣಿ ಮಹಿಳೆ ಮೇಲೆ ಕಾಡಾನೆ ದಾಳಿ:
ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಬೈಕ್ ಮೇಲೆ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಬೇಲೂರು ತಾಲೂಕಿನ ಲಕ್ಕುಂದ ಗ್ರಾಮದ ಚಂದ್ರೇಗೌಡ (58) ಹಾಗೂ ಪೂರ್ಣಿಮಾ (25) ಎಂಬುವವರು ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ದಾಳಿ ನಡೆಸಿದೆ.
ಗರ್ಭಿಣಿ ಮಹಿಳೆ ಗಟ್ಟಿಯಾಗಿ ಕಿರುಬಾಡಿದ ನಂತರ ಕಾಡಾನೆ ಕಾಡಿನೊಳಕ್ಕೆ ಹೋಗಿದೆ. ಗಾಯಗೊಂಡವರನ್ನು ತಕ್ಷಣವೇ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಎಚ್ಚೆತ್ತುಕೊಳ್ಳದ ಅರಣ್ಯ ಅಧಿಕಾರಿಗಳು:
ಎಲ್ಲೆಡೆ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ದಿನನಿತ್ಯ ರೈತರ ಬೆಳೆಗಳ ಮೇಲೆ ಹಾಗೂ ಮಾನವರ ಮೇಲೆ ದಾಳಿ ನಡೆಸುತ್ತಿದೆ. ಕಾಡಾನೆ ಹಾವಳಿ ಬಗ್ಗೆ ಅರಣ್ಯಾಧಿಕಾರಿಗಳಿಗೆ ಎಷ್ಟೆ ಮನವಿ ಮಾಡಿದ್ರು ಕೂಡ ಪ್ರಯೋಜನವಾಗ್ತಿಲ್ಲ. ಇನ್ನಾದರೂ ಅರಣ್ಯ ಇಲಾಖೆ ಈ ಬಗ್ಗೆ ಎಚ್ಚೆತ್ತು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.












