ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಉಚಿತ ನೇತ್ರ ತಪಾಸಣೆ, ನೇತ್ರ ಪೊರೆ ಶಸ್ತ್ರ ಚಿಕಿತ್ಸೆ ಹಾಗೂ ಉಚಿತ ಮ್ಯಾಮೊಗ್ರಫಿ ತಪಾಸಣಾ ಶಿಬಿರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ನೆಮ್ಮಾರು ಇಲ್ಲಿ ಆಯೋಜಿಸಲಾಗಿದೆ.
ಇದನ್ನೂ ಓದಿ: ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th, PUC ವಿದ್ಯಾರ್ಹತೆ: 15,000 ಸಂಬಳ

ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ-ತೀರ್ಥಹಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರ ನೆಮ್ಮಾರು ಗ್ರಾಮ ಪಂಚಾಯತ್, ನೆಮ್ಮಾರು ತಾಲೂಕು ಆರೋಗ್ಯ ಅಧಿಕಾರಿಗಳು, ಶೃಂಗೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ), ಚಿಕ್ಕಮಗಳೂರು ಇವರುಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ, ನೇತ್ರ ಪೊರೆ ಶಸ್ತ್ರ ಚಿಕಿತ್ಸೆ ಹಾಗೂ ಸ್ತನ ಕ್ಯಾನ್ಸರ್ (ಬ್ರೆಸ್ಟ್ ಕ್ಯಾನ್ಸರ್) ತಪಾಸಣಾ ಶಿಬಿರವನ್ನು ಇದೇ ಬುಧವಾರ 12-03-2025 ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ನೆಮ್ಮಾರು ಇಲ್ಲಿ ಆಯೋಜಿಸಲಾಗಿದೆ.
ಉಚಿತ ನೇತ್ರ ತಪಾಸಣೆ, ನೇತ್ರ ಪೊರೆ ಶಸ್ತ್ರ ಚಿಕಿತ್ಸೆ ಇರುವವರಿಗೆ ಸೂಚನೆ:
1. ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಪಡುವ ರೋಗಿಗಳು ಶಿಬಿರದ ತಪಾಸಣಾ ದಿನದಂದೇ ವೈದ್ಯರ ಜೊತೆಯಲ್ಲಿ ಹೋಗಲು ಸಿದ್ಧವಿರಬೇಕು.
2. ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಉಚಿತ ಸಾರಿಗೆ ಮತ್ತು ವಸತಿ ಸೌಲಭ್ಯವನ್ನು ನೀಡಲಾಗುವುದು ಹಾಗೂ ಶಸ್ತ್ರಚಿಕಿತ್ಸೆಯ ನಂತರ ಪುನಃ ಅದೇ ಸ್ಥಳಕ್ಕೆ ಕರೆದುಕೊಂಡು ಬರಲಾಗುವುದು.
3. ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಂಡು ಬಂದವರು ಪುನಃ ಮರು ಪರೀಕ್ಷೆಗೆ ವೈದ್ಯರು ತಿಳಿಸಿದ ದಿನಾಂಕ ಹಾಗೂ ಸ್ಥಳಕ್ಕೆ ಕಡ್ಡಾಯವಾಗಿ ಬರತಕ್ಕದ್ದು.
4. ಶಿಬಿರಕ್ಕೆ ಬರುವವರು ಶುದ್ಧವಾಗಿ ಮುಖ ಕ್ಷೌರ ಮಾಡಿಕೊಂಡು, ಸ್ವಚ್ಛವಾದ ಬಟ್ಟೆಯನ್ನು ಧರಿಸಿಕೊಂಡು ಬರಬೇಕು.
5 . ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ ಫಲಾನುಭವಿಗಳು ಶಿಬಿರಕ್ಕೆ ಬರುವಾಗ ಆಧಾರ್ ಕಾರ್ಡ್/ವೋಟರ್ ಐ.ಡಿ./ರೇಷನ್ ಕಾರ್ಡ್ ಇದರಲ್ಲಿ ಯಾವುದಾದರೂ ಒಂದನ್ನು ಕಡ್ಡಾಯವಾಗಿ ತರಬೇಕು.
6. ಮೊಬೈಲ್ ನಂಬರನ್ನು ತರಬೇಕು.
ಇದನ್ನೂ ಓದಿ: ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಕ್ಲೀಯರ್!; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ
ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ಉಚಿತ ತಪಾಸಣೆ ಮಾಡಿಸಿಕೊಳ್ಳಿ:
1. ನಿಮ್ಮ ವಯಸ್ಸು 40 ದಾಟಿದ್ದರೆ.
2. ಸ್ತನ ಕ್ಯಾನ್ಸರ್ನ ಮೊದಲ ಹಂತದ ಸಂಬಂಧವನ್ನು ಹೊಂದಿದ್ದರೆ.
3. ಸ್ತನ ಭಾಗದಲ್ಲಿ ಗಟ್ಟಿಯಾಗುವಿಕೆ ಅಥವಾ ಗಂಟು ಇದ್ದರೆ.
4. ಸ್ತನದ ಆಕಾರದಲ್ಲಿ ಅಥವಾ ಗಾತ್ರದಲ್ಲಿ ಬದಲಾವಣೆ ನಿರ್ದಿಷ್ಟವಾಗಿ ಒಳಹೋದಂತೆ ಆಗುವುದು ಅಥವಾ ಅನಿಯಮಿತ ಆಕಾರ ಹೊಂದಿದ್ದರೆ.
5. ಸ್ತನದಿಂದ ರಕ್ತಸ್ರಾವ ಕಂಡುಬಂದರೆ.
6. ಸ್ತನ ತೊಟ್ಟುಗಳಲ್ಲಿ ಅಥವಾ ಅದರ ಸುತ್ತ ಬಿರುಕುಗಳು ಇದ್ದರೆ ಕಂಕುಳಿನ ಭಾಗದಲ್ಲಿ ಊತ ಅಥವಾ ಗಂಟು ಕಂಡುಬಂದರೆ.
ಸೂಚನೆ: ಶಿಬಿರಕ್ಕೆ ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ಮತ್ತು ಓಟರ್ ಐ.ಡಿ ಪ್ರತಿಯ ಜೆರಾಕ್ಸ್ ಪ್ರತಿಯನ್ನು ತರುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ: ಅಡುಗೆ ಮನೆಯಲ್ಲಿ ಈ 2 ಪಾತ್ರೆಗಳನ್ನ ಉಲ್ಟಾ ಇಡಬೇಡಿ!; ಲಕ್ಷ್ಮಿ ಮುನಿಸಿಗೆ ನೀವು ಬಡವರಾಗ್ತೀರಿ!












