ಶೃಂಗೇರಿ: ಶ್ರೀ ಶಾರದಾಪೀಠ, ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಚಿಕ್ಕಮಗಳೂರು ಸೇವಾಭಾರತಿ ಆಶ್ರಯದಲ್ಲಿ ಬೆನ್ನುಹುರಿ ಅಪಘಾತ ಹೊಂದಿದವರಿಗೆ ವಸತಿಯುತ ಉಚಿತ ಆರೋಗ್ಯ ತಪಾಸಣೆ ಮತ್ತು ಗಾಲಿಕುರ್ಚಿ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದನ್ನೂ ಓದಿ: ಬರ ಪರಿಹಾರ; 16 ಲಕ್ಷ ರೈತ ಕುಟುಂಬಕ್ಕೆ 3,000 ಹಣ ಜಮಾ

ಬುಧವಾರ 22 ರಿಂದ (ನಾಳೆ) ಶುಕ್ರವಾರ 24 ರವರೆಗೆ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಡೆಯಲಿದ್ದು, ಶ್ರೀಮಠದ ಆಡಳಿತಾಧಿಕಾರಿ ಪಿ.ಎ.ಮುರಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಸೌತಡ್ಕ ಸೇವಾಧಾಮದ ಸಂಸ್ಥಾಪಕ ಕೆ.ವಿನಾಯಕ ರಾವ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶ್ವತ್ಥಬಾಬು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಪೃಥ್ವಿಜಿತ್, ತಹಸೀಲ್ದಾರ್ ಗೌರಮ್ಮ, ಸರ್ಜನ್ ಡಾ. ಅತಿಥಿ ವಿಜಯ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ರೈತರ ಗಮನಕ್ಕೆ; ಬಿತ್ತನೆ ಬೀಜ ಖರೀದಿಗೆ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ
24 ಶುಕ್ರವಾರದಂದು ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಆಯೋಜಿಸಿದ್ದು, ಬೆಳಗ್ಗೆ 9.30 ಕ್ಕೆ ಮುಖ್ಯಬೀದಿಯಲ್ಲಿ ಜಾಥಾ ಸಾಗಲಿದ್ದು ಶೃಂಗೇರಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸಂದೀಪ್ ಚಾಲನೆ ನೀಡಲಿದ್ದಾರೆ. ನಂತರ ಗಾಲಿಕುರ್ಚಿ, ಮೆಡಿಸಿನ್ ಕಿಟ್ ಹಾಗೂ ನೀರಿನ ಹಾಸಿಗೆ ವಿತರಿಸಲಾಗುತ್ತದೆ.
24 ರ ಬೆಳಗ್ಗೆ 11.30 ಕ್ಕೆ ಸಮಾರೋಪ ನಡೆಯಲಿದ್ದು, ಕೊಪ್ಪದ ಅರ್ಥೋಪೆಡಿಕ್ ಸರ್ಜನ್ ಡಾ. ಉದಯ್ ಶಂಕರ್ ಹಾಗೂ ಶ್ರೀ ಅಭಿನವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಡಾ. ಪ್ರಣವ್ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ಬ್ಯಾಂಕ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್; ಈ ಬ್ಯಾಂಕ್ ನಲ್ಲಿ ಭರ್ಜರಿ ಜಾಬ್ ಆಫರ್; ಈ ರೀತಿ ಅರ್ಜಿ ಸಲ್ಲಿಸಿ
ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ ರಾತ್ರಿ ಜಿಲ್ಲೆಯ ಹಲವೆಡೆ ಮಳೆ ಅಬ್ಬರಿಸಿದ್ದ ಪರಿಣಾಮ ಹಲವು ಅವಾಂತರ ಸೃಷ್ಟಿಯಾಗಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಈ ರೀತಿ ಮಾಡಿ
ಚಿಕ್ಕಮಗಳೂರು ನಗರದಲ್ಲಿ ಬೈಕ್ ಗಳ ಮೇಲೆ ಕಾಂಪೌಂಡ್ ಕುಸಿದು ಬಿದ್ದು, ಎರಡು ಬೈಕ್ ಗಳು ಸಂಪೂರ್ಣ ಜಖಂಗೊಂಡಿದೆ. ಅಲ್ಲದೆ ಭಾರೀ ಮಳೆಯಿಂದ ಗುಡಿಸಲಿಗೆ ಚರಂಡಿ ನೀರು ನುಗ್ಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿಯಲ್ಲಿ ನಡೆದಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
ಎರಡು ಗುಡಿಸಲು ಹಾಗೂ ಗೊಬ್ಬರದ ಗೋಡಾನ್ ಗೆ ಮಳೆ ನೀರು ನುಗ್ಗಿದ್ದು, ಚರಂಡಿ ಕಾಮಗಾರಿಯನ್ನ ಅರ್ಧಕ್ಕೆ ನಿಲ್ಲಿಸಿರುವ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇದೇ ಸ್ಥಳದಲ್ಲಿ ಗೋಡಾನ್ ಗೆ ನೀರು ನುಗ್ಗಿರೋದ್ರಿಂದ ಅಪಾರ ಪ್ರಮಾಣದ ಗೊಬ್ಬರ ಕೂಡ ಹಾಳಾಗಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಅವಾಂತರ ಸೃಷ್ಟಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ವಾಹನಗಳಿಗೆ hsrp ಅಳವಡಿಕೆ; ಗಡುವು ಮತ್ತೆ ವಿಸ್ತರಿಸುತ್ತಾ ಸರ್ಕಾರ…?
ಮನೆ ಮೇಲೆ ಮರ ಬಿದ್ದು ಸಂಪೂರ್ಣ ಜಖಂ:
ಇನ್ನು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಗ್ರಾಮದ ಕಸ್ಕೆ ಎಂಬ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊAಡಿದೆ. ಅದೃಷ್ಟವಶಾತ್ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.












