ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬಣಕಲ್ ಕ್ರೈಸ್ತರ ಅಭಿವೃದ್ಧಿ ಸಂಘ ಮತ್ತು ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ಇವರುಗಳ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ಪ್ರಸಿದ್ಧ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ವತಿಯಿಂದ ಬಣಕಲ್ನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಕಂಕನಾಡಿ ಫಾ.ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸಂಯೋಜಕ ಹಾಗೂ ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕ ಹರ್ಷ ಮೆಲ್ವಿನ್ ಲಸ್ರಾದೊ ತಿಳಿಸಿದ್ದಾರೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ ಅವರು, ಈ ಶಿಬಿರವು ಮಾರ್ಚ್ 29ರ ಭಾನುವಾರದಂದು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 3.30ರ ವರೆಗೆ ಬಣಕಲ್ನ ಚರ್ಚ್ ಸಭಾ ಭವನದಲ್ಲಿ ನಡೆಯಲಿದೆ. ಶಿಬಿರದಲ್ಲಿ ಸಾರ್ವಜನಿಕರಿಗೆ ವೈವಿಧ್ಯಮಯ ವೈದ್ಯಕೀಯ ಸೇವೆಗಳು ಲಭ್ಯವಿದ್ದು, ಸಾಮಾನ್ಯ ಕಾಯಿಲೆಗಳ ತಪಾಸಣೆಯ ಜೊತೆಗೆ ಇ.ಸಿ.ಜಿ., ಬಿ.ಪಿ. ಹಾಗೂ ಸಕ್ಕರೆ ಕಾಯಿಲೆಯ ಪರೀಕ್ಷೆಗಳನ್ನು ಉಚಿತವಾಗಿ ಮಾಡಿಸಿಕೊಳ್ಳಬಹುದು.
ಸ್ತ್ರೀ ರೋಗ ತಪಾಸಣೆ ಮತ್ತು ಸಂತಾನೋತ್ಪತ್ತಿ ಆರೋಗ್ಯಕ್ಕೆ ಸಂಬಂಧಿಸಿದ ಸಮಾಲೋಚನೆಗಳು ಮಧ್ಯಾಹ್ನ 12.30ರ ನಂತರ ಲಭ್ಯವಿರುತ್ತವೆ. ಇವುಗಳೊಂದಿಗೆ ಕಣ್ಣಿನ ತಪಾಸಣೆ ನಡೆಸಿ ಅಗತ್ಯವಿದ್ದಲ್ಲಿ ಕನ್ನಡಕಗಳನ್ನು ನೀಡಲಾಗುವುದು ಹಾಗೂ ಮಕ್ಕಳ ತಪಾಸಣೆ ಮತ್ತು ಚರ್ಮರೋಗ ತಪಾಸಣೆಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಉತ್ತಮ ಆರೋಗ್ಯ ಉತ್ತಮ ಜೀವನ’ ದ್ಯೇಯದೊಂದಿಗೆ ಈ ಶಿಬಿರ ಅಯೋಜಿಸಲಾಗಿದೆ ಎಂದರು. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!












