ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಶಾಲೆಗಳಲ್ಲಿ “ಅತ್ಯುತ್ತಮ ಎಸ್ ಡಿ ಎಂ ಸಿ ಪ್ರಶಸ್ತಿ”ಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಡಘಟ್ಟ ಆಯ್ಕೆಯಾಗಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ; RC, ವಿಮೆ ಕುರಿತು ಬಿಗ್ ಅಪ್ಡೇಟ್

2024-25 ನೇ ಸಾಲಿನಲ್ಲಿ “ ಪುಷ್ಟಿ” ಕಾರ್ಯಕ್ರಮದಡಿಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಶಾಲೆಗಳಿಗೆ ಪ್ರಶಸ್ತಿ ನೀಡುವ ಕುರಿತು ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಈ ಆಯ್ಕೆ ಪ್ರಕ್ರಿಯೆಯಲ್ಲಿ ಗಂಡಘಟ್ಟ ಶಾಲೆ ಆಯ್ಕೆಯಾಗಿದೆ.
ಇದನ್ನೂ ಓದಿ: ಬಿಜೆಪಿಯಿಂದ 6 ವರ್ಷ ಕಾಲ ಬಸನಗೌಡ ಪಾಟೀಲ್ ಉಚ್ಚಾಟನೆ!
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಡಘಟ್ಟದ ಎಸ್ ಡಿ ಎಂ ಸಿ ಘಟಕ ಶಾಲೆಯ ಪ್ರಗತಿಗೆ ಹಾಗೂ ಶೈಕ್ಷಣಿಕ ಗುಣಮಟ್ಟದ ವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಾಂಘಿಕ ಪ್ರಯತ್ನಕ್ಕೆ ಲಭಿಸಿದ ಪ್ರೋತ್ಸಾಹವಾಗಿದೆ. ಪ್ರಶಸ್ತಿಗೆ ಆಯ್ಕೆಯಾದ ಶಾಲೆಗಯ ಅಭಿವೃದ್ಧಿಗೆ ರಾಜ್ಯ ಕಚೇರಿಯಿಂದ ಒಂದು ಲಕ್ಷ ರೂ. ಗಳ ಅನುದಾನ ಕೂಡ ಬಿಡುಗಡೆ ಆಗಿದೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ವಿತರಣೆ!; ಸರ್ಕಾರದಿಂದ ಮಹತ್ವದ ನಿರ್ಧಾರ













