ಮಡಿಕೇರಿ: (ನ್ಯೂಸ್ ಮಲ್ನಾಡ್ ವರದಿ) ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಜೂ. 7ರ ಬೆಳಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿಯೊಬ್ಬರು ಮೃತಪಟ್ಟಿದ್ದಾರೆ.
ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನುತ(27) ಮೃತ ಯುವತಿ. ಕೊಡಗಿಗೆ ಪ್ರವಾಸ ಬಂದಿದ್ದ ಈಕೆ ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೇಯಲ್ಲಿ ತಂಗಿದ್ದರು. ರವಿವಾರ ಬೆಳಗ್ಗೆ ಸ್ನಾನ ಮಾಡಲು ಬಾತ್ ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಸ್ಥಳದಲ್ಲಿಯೇ ಸಾವಿಗೀಡಾದರು.

ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















