ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಜೋಕಾಲಿ ಆಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಲಕ್ಕಿನಕೊಪ್ಪದಲ್ಲಿ ನಡೆದಿದೆ.
ರೂಮ್ ಬಾಗಿಲು ಹಾಕಿ, ಪಂಚೆ ಕಟ್ಟಿ ಜೋಕಾಲಿ ಆಡುತ್ತಿದ್ದ ವೇಳೆ ಶಿವಮೊಗ್ಗ ವಿದ್ಯಾನಗರದ ಪ್ರಣಮ್ಯ(9) ಎಂಬ ಬಾಲಕಿ ಸಾವನ್ನಪ್ಪಿದ್ದಾಳೆ. 3 ದಿನದ ಹಿಂದೆ ನಡೆದ ಘಟನೆ ತಡವಾಗಿ ಶುಕ್ರವಾರ ಬೆಳಕಿಗೆ ಬಂದಿದೆ. ಬೇಸಗೆ ರಜೆ ಕಳೆಯಲು ಚಿಕ್ಕಮ್ಮನ ಮನೆಗೆ ಬಂದಿದ್ದ ವೇಳೆ ದುರಂತ ನಡೆದಿದೆ.

ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














