ಚಿಕ್ಕಮಗಳೂರು: ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಬಾಲಕಿ 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ

ಚಿಕ್ಕಮಗಳೂರು: (ನ್ಯೂಸ್‌ ಮಲ್ನಾಡ್‌ ವರದಿ) ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಇಂದು (ಏಪ್ರಿಲ್ 10) ಪತ್ತೆಯಾಗಿದೆ. ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಸಿಕ್ಕಿರುವುದು ದೃಢಪಟ್ಟಿದೆ.

ಕೇರಳದಿಂದ ಏಪ್ರಿಲ್ 7ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 40 ಜನರ ಪ್ರವಾಸಿ ತಂಡದಲ್ಲಿ ಶ್ರೀನಂದಾ ಕೂಡ ಇದ್ದರು. ದತ್ತಾತ್ರೇಯ ಪೀಠ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಾಲಕಿ ಹಠಾತ್ತಾಗಿ ನಾಪತ್ತೆಯಾಗಿದ್ದರು. ಈ ಘಟನೆ ನಡೆದ ನಂತರ ಪೊಲೀಸರ ತಂಡ ಹುಡುಗಿಗಾಗಿ ಕಾರ್ಯಚರಣೆಯನ್ನು ನಡೆಸಲಾಗಿತ್ತು . ಇದೀಗ ಹುಡುಗಿಯ ಮೃತದೇಹ ಪತ್ತೆಯಾಗಿದೆ.

ಬಾಲಕಿಯ ಪತ್ತೆಗಾಗಿ ಎಸ್‌ಡಿಆರ್‌ಎಫ್ (SDRF), ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಎಎನ್ಎಫ್ (ANF) ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶವಾದ್ದರಿಂದ ಡ್ರೋನ್ ಹಾಗೂ ಥರ್ಮಲ್ ಕ್ಯಾಮೆರಾಗಳನ್ನು ಸಹ ಬಳಸಲಾಗಿತ್ತು.

ಸತತ ಮೂರು ದಿನಗಳ ಕಾಲ ನಡೆಸಿದ ತೀವ್ರ ಶೋಧದ ನಂತರ, ಇಂದು ಮಾಣಿಕ್ಯಧಾರಾದ ಅತ್ಯಂತ ಆಳವಾದ ಪ್ರಪಾತದ ಕೆಳಗೆ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆಯೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಕೇರಳದಿಂದ ಆಗಮಿಸಿದ್ದ ಪೋಷಕರು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ


Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.