ನರ್ಸಿಂಗ್ ಕ್ಷೇತ್ರದಲ್ಲಿ ಭವಿಷ್ಯ ಕಟ್ಟಿಕೊಳ್ಳಲು ಶೃಂಗೇರಿಯಲ್ಲಿ ಸುವರ್ಣಾವಕಾಶ – 50% ಶುಲ್ಕ ರಿಯಾಯಿತಿ

ಶೃಂಗೇರಿಯಲ್ಲಿರುವ ಶಾರದಾ ನರ್ಸಿಂಗ್ ಇನ್ಸ್ಟಿಟ್ಯೂಟ್‌ನಲ್ಲಿ 2026–27ನೇ ಸಾಲಿನ GNM ನರ್ಸಿಂಗ್ ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಶಾರದಾ ದೇವಿ ಹಾಗೂ ಉಭಯ ಜಗದ್ಗುರುಗಳ ದಿವ್ಯ ಆಶೀರ್ವಾದದೊಂದಿಗೆ ಈ ಬಾರಿ ವಿದ್ಯಾರ್ಥಿಗಳಿಗೆ ಆಕರ್ಷಕ ಶುಲ್ಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ.

ಸಂಸ್ಥೆಯ ಪ್ರಕಟಣೆಯ ಪ್ರಕಾರ, ಒಟ್ಟು ಶುಲ್ಕದಲ್ಲಿ 50% ರಿಯಾಯಿತಿ ಘೋಷಿಸಲಾಗಿದ್ದು, ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ 80% ಮತ್ತು ಮೇಲ್ಪಟ್ಟ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತದೆ. ಆದರೆ ಈ ವಿಶೇಷ ರಿಯಾಯಿತಿ ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಬೇಗಾರ್ ಸೇರಿದಂತೆ ಸುತ್ತಮುತ್ತಲಿನ ಸ್ಥಳಗಳ ಸ್ಥಳೀಯ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ. ಈ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಲಭ್ಯವಿರುವುದಿಲ್ಲವೆಂದು ತಿಳಿಸಲಾಗಿದೆ.

ಆರೋಗ್ಯ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿ ನಿರ್ಮಿಸಲು ಇದು ಉತ್ತಮ ಅವಕಾಶವಾಗಿದ್ದು, “ಕಲಿಯಿರಿ – ಆರೈಕೆ ಮಾಡಿ – ಸೇವೆ ಮಾಡಿ – ಯಶಸ್ಸು ಸಾಧಿಸಿ” ಎಂಬ ಸಂದೇಶದೊಂದಿಗೆ ವಿದ್ಯಾರ್ಥಿಗಳನ್ನು ಆಕರ್ಷಿಸಲಾಗುತ್ತಿದೆ. ಸೀಮಿತ ಸೀಟುಗಳು ಮಾತ್ರ ಲಭ್ಯವಿರುವುದರಿಂದ ಆಸಕ್ತರು ಶೀಘ್ರವೇ ಅರ್ಜಿ ಸಲ್ಲಿಸಲು ಸಂಸ್ಥೆ ಮನವಿ ಮಾಡಿದೆ.

ಈ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮುಖ ಆಸ್ಪತ್ರೆಗಳಲ್ಲಿ ಉದ್ಯೋಗಾವಕಾಶಗಳೂ ಲಭ್ಯವಿವೆ. ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ವಿವಿಧ ನಗರಗಳ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ನೇಮಕಾತಿ ಅವಕಾಶಗಳನ್ನು ಒದಗಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ 9804663399 ಅಥವಾ 6364222150 ಸಂಖ್ಯೆಯನ್ನು ಸಂಪರ್ಕಿಸಬಹುದು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.