ಮಡಿಕೇರಿ: (ನ್ಯೂಸ್ ಮಲ್ನಾಡ್ ವರದಿ) ರೆಸಾರ್ಟ್‌ಗೆ ಬಂದಿದ್ದ ಗೋವಾದ ಪ್ರವಾಸಿಗ ರೋರ್ವರು ಅಲ್ಲಿನ ಈಜುಕೊಳದಲ್ಲಿ ಈಜಾಡುತ್ತಿದ್ದ ವೇಳೆ ಮುಳುಗಿ ಸಾವಿಗೀಡಾದ ಘಟನೆ ಸೋಮವಾರ ಮಧ್ಯಾಹ್ನ ವಿರಾಜಪೇಟೆ ಸಮೀಪದ ರೆಸಾರ್ಟ್‌ನಲ್ಲಿ ಸಂಭವಿಸಿದೆ.
ಗೋವಾದಿಂದ ಮನೋಜ್ ಆನಂದ್ (57) ಅವರು ಮಧ್ಯಾಹ್ನ ಪತ್ನಿ ಮತ್ತು ಮಕ್ಕಳೊಂದಿಗೆ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಮಧ್ಯಾಹ್ನದ ವೇಳೆ ಮನೋಜ್ ಅವರು ಈಜುಕೊಳಕ್ಕೆ ಇಳಿದ ಸಂದರ್ಭದಲ್ಲಿ ಉಸಿರಾಟದ ತೊಂದರೆ ಉಂಟಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮನೋಜ್ ನೀರಿನಲ್ಲಿ ಮುಳುಗಿದ್ದನ್ನು ಗಮನಿಸಿದ ಕುಟುಂಬ ಸದಸ್ಯರು ಕೂಡಲೇ ರೆಸಾರ್ಟ್ ಸಿಬ್ಬಂದಿ ನೆರವಿನಿಂದ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

















