ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ರಿಷಲ್ ತಾವ್ರೊ ಅವರು ಮಂಗಳೂರು ವಿಶ್ವವಿದ್ಯಾಲಯದ ಬಿಟೆಕ್ ಪದವಿಯಲ್ಲಿ ಪ್ರಥಮ ರ್ಯಾಂಕ್ ಗಳಿಸಿ ಚಿನ್ನದ ಪದಕ ಪಡೆದು ವಿಶಿಷ್ಟ ಸಾಧನೆ ಮೆರೆದಿದ್ದಾರೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಮಂಗಳೂರಿನ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ರಿಷಲ್ ತಾವ್ರೊ ಅವರು ತಮ್ಮ ಅಪ್ರತಿಮ ಪರಿಶ್ರಮ ಮತ್ತು ಏಕಾಗ್ರತೆಯಿಂದ ಈ ಸಾಧನೆ ಸಾಧಿಸಿದ್ದು, ನಿಡುವಾಳೆ ಗ್ರಾಮದ ಗೌರವವನ್ನು ರಾಜ್ಯ ಮಟ್ಟದಲ್ಲಿ ಎತ್ತಿದ್ದಾರೆ.
ನಿಡುವಾಳೆಯ ಜೆಎಂಜೆ ಪ್ಯಾನ್ಸಿ ಸ್ಟೋರ್ಸ್ ಮಾಲೀಕರಾದ ಜೋಸೆಫ್ ತಾವ್ರೊ ಹಾಗೂ ರೋಸ್ಲಿನ್ ದಂಪತಿಯ ಪುತ್ರಿಯಾಗಿರುವ ಇವರು. ಈ ಸಾಧನೆಗೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!












