ಗೋಮಾಳ ಮತ್ತು ಸೊಪ್ಪಿನಬೆಟ್ಟ ಮಂಜೂರಾತಿಗಿಲ್ಲ ಅವಕಾಶ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯಾದ್ಯಂತ ಇರುವ ಸರ್ಕಾರಿ ಜಮೀನನ್ನು ಅಕ್ರಮವಾಗಿ ಭೂ ಒತ್ತುವರಿ ಮಾಡಿಕೊಂಡಿರುವವರಿಂದ ರಕ್ಷಿಸಿಕೊಳ್ಳುವ ಸಲುವಾಗಿ ಲ್ಯಾಂಡ್ ಬೀಟ್ ಆಪ್ ಅನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಮುಂದಿನ ತಿಂಗಳ 15ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಸುದ್ಧಿಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್; ಡೀಸೆಲ್ ಪಂಪ್ ಸೆಟ್ ಹೊಂದಿರುವವರಿಗೂ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಕಂದಾಯ ಇಲಾಖೆ ಜಮೀನು ಸೇರಿದಂತೆ ಕೆರೆ, ಸ್ಮಶಾನ ಇನ್ನಿತರೆ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಬರುವ ವಿವಿಧ ಇಲಾಖೆಗಳಿಗೆ ಸೇರಿದ ಜಾಗಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಶೀಘ್ರವೇ ಆಪ್ ನಲ್ಲಿ ಸೇರ್ಪಡೆಗೊಳಿಸಲಾಗುವುದು. ಶಿಕ್ಷಣ ಇಲಾಖೆ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇನ್ನಿತರೆ ಇಲಾಖೆಗಳಿಗೆ ಸೇರಿದಂತೆ ಸಾಕಷ್ಟು ಜಮೀನು ರಾಜ್ಯದಲ್ಲಿದೆ ಅದರ ಬಗ್ಗೆ ಸೂಕ್ತ ಮಾಹಿತಿಗಳನ್ನು ನೀಡಬೇಕು ಎಂದು ಕೋರಿದ್ದೇವೆ. ಪ್ರತಿ ಗ್ರಾಮ ಪಂಚಾಯ್ತಿವಾರು ಮಾಹಿತಿಯನ್ನು ಸಹ ಆಪ್‌ನಲ್ಲಿ ಅಡಕಗೊಳಿಸಲಾಗುವುದು ಎಂದು ತಿಳಿಸಿದರು.

ಜಮೀನುಗಳಿಗೆ ಸಂಬಂಧಿಸಿದ ಸರ್ವೇ ನಂಬರ್ ಸಹಿತ ಇತರೆ ಮಾಹಿತಿಗಳಿರುವ ಮ್ಯಾಪ್‌ಗಳನ್ನು ತಯಾರಿಸಲಾಗುತ್ತಿದ್ದು ಈ ಆಪ್‌ ತೆರೆದರೆ ನಾವು ನಿಂತಿರುವ ಜಾಗದ ಮಾಹಿತಿ ಸಹ ಸ್ಥಳದಲ್ಲೇ ಸಿಗಲಿದೆ ಎಂದರು ಹೇಳಿದರು.


ಇದನ್ನೂ ಓದಿ: ಎಲ್ಲಾ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್; HSRP ನಂಬರ್ ಪ್ಲೇಟ್ ನಿಯಮ ಚೇಂಜ್


ಸೊಪ್ಪಿನ ಬೆಟ್ಟ ಮಂಜೂರಾತಿ ಇಲ್ಲ:
ಸೊಪ್ಪಿನ ಬೆಟ್ಟ ಪ್ರದೇಶದಲ್ಲಿ ಯಾರಿಗೂ ಭೂ ಮಂಜೂರಾತಿ ಮಾಡಲು ಸಾಧ್ಯವಿಲ್ಲ. 2010 ರಲ್ಲಿ ಹೊರಡಿಸಲಾದ ಸರ್ಕಾರದ ಸುತ್ತೋಲೆಯಲ್ಲಿ ಸೊಪ್ಪಿನ ಬೆಟ್ಟ ಪ್ರದೇಶದಲ್ಲಿ ಭೂ ಮಂಜೂರಾತಿಯನ್ನು ತಕ್ಷಣದಿಂದ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಮೀನು ಮಂಜೂರು ಮಾಡುವ ಮತ್ತು ಸಾಗುವಳಿ ಸಕ್ರಮೀಕರಣಗೊಳಿಸುವ ದಿಸೆಯಲ್ಲಿ ಕೈಗೊಳ್ಳಬಹುದಾದ ಕ್ರಮದ ಬಗ್ಗೆ ತೀರ್ಮಾನಿಸಲು ಕಾನೂನು ಇಲಾಖೆಗೆ ಕಳಿಸಿಕೊಡಲಾಗಿದೆ ಎಂದರು.

ಇನ್ನು ಜಿಲ್ಲೆಯ ಶೃಂಗೇರಿ ಹಾಗೂ ಚಿಕ್ಕಮಗಳೂರು ತಾಲೂಕುಗಳ ಸೊಪ್ಪಿನ ಬೆಟ್ಟಗಳಲ್ಲಿ ಈಗಾಗಲೇ ಭೂ ಮಂಜೂರಾತಿ ನೀಡಲಾಗಿದ್ದು ಜನವಸತಿ, ಕೃಷಿ ಕಾರ್ಯ ನಡೆಸಲಾಗುತ್ತಿದೆ. ಅಂತಹವರ ಕತೆ ಏನು ಎನ್ನುವ ಪ್ರಶ್ನೆ ಎದ್ದಿದೆ. ಅವರಿಗೆ ಯಾವ ರೀತಿ ಸಹಾಯ ಮಾಡಬಹುದು ಎನ್ನುವುದನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಗೋಮಾಳಗಳಲ್ಲಿ 50, 53 ಸೇರಿದಂತೆ ಇತರೆ 5 ರೀತಿಯ ಕಾಯ್ದೆಯಡಿ ಗಳಲ್ಲಿ ಹಕ್ಕುಪತ್ರ ನೀಡಲು ಅವಕಾಶವಿಲ್ಲ. ಈ ಬಗ್ಗೆಯೂ ಉನ್ನತ ಮಟ್ಟದಲ್ಲಿ ಚರ್ಚೆ ಮಾಡಿದ್ದೇವೆ. ಈ ವಿಷಯ ಸಹ ಕಾನೂನು ಇಲಾಖೆ ಮುಂದಿದೆ ಎಂದು ಹೇಳಿದರು.


ಇದನ್ನೂ ಓದಿ: 3ನೇ ಕಂತಿನ ಬೆಳೆ ಪರಿಹಾರದ ಹಣ ಜಮಾ!; ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ


ಭೂಕಬಳಿಕೆ ಆಗಿರುವ ಭೂಮಿಯನ್ನು ಬಿಡಿಸಿಕೊಂಡು ವಿವಿಧ ಸರ್ಕಾರಿ ವಸತಿ ಯೋಜನೆಗಳು, ಹಾಗೂ ಸಾರ್ವಜನಿಕ ಉದ್ದೇಶಕ್ಕೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಎಲ್ಲಾ ಆರ್‌ಟಿಸಿಗಳನ್ನು ಆಧಾರ್ ಕಾರ್ಡ್ ಗಳೊಂದಿಗೆ ಜೋಡಿಸುವ ಕಾರ್ಯ ಪ್ರಗತಿ ಯಲ್ಲಿದೆ. ಈಗಾಗಲೇ ಶೇ.50ರಷ್ಟು ಜೋಡಣೆ ಆಗಿದ್ದು. ಇದರಿಂದ ರೈತರಿಗೆ ಅನುಕೂಲವಾಗಲಿದ್ದು ನಕಲಿ ದಾಖಲೆಗಳನ್ನು ಸೃಷ್ಟಿಸುವುದಕ್ಕೆ ಕಡಿವಾಣ ಬೀಳಲಿದೆ ಎಂದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.