ಬಾಳೆಹೊನ್ನೂರಿನಲ್ಲಿ ಕಾಫಿ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆ- ವಾಣಿಜ್ಯ, ಕೈಗಾರಿಕಾ ಸಚಿವ ಪಿಯೂಷ್ ಗೋಯಲ್

ಹಾಸನ: (ನ್ಯೂಸ್ ಮಲ್ನಾಡ್ ವರದಿ) ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್) ನಂತರ ಕರ್ನಾಟಕದ ಕಾಫಿಯನ್ನು ಮತ್ತೊಂದು ರೀತಿಯ ಚಿನ್ನವಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ


ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಒಕ್ಕೂಟ ಆಯೋಜಿಸಿದ್ದ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು ಅವರು, 2011 ರಿಂದ ಸ್ಥಗಿತಗೊಂಡಿದ್ದ ಸಮಗ್ರ ಕಾಫಿ ಅಭಿವೃದ್ಧಿ ಯೋಜನೆಯನ್ನು ಮತ್ತೆ ಜಾರಿಗೆ ತರಲಾಗಿದೆ. ಇದು ಕಾಫಿಯ ಗುಣಮಟ್ಟವನ್ನು ಸುಧಾರಿಸಲು ಮತ್ತು ಯಾಂತ್ರೀಕರಣಕ್ಕೆ ಗಮನ ಹರಿಸುತ್ತದೆ. ಇದು ರೈತ ಉತ್ಪಾದಕ ಕಂಪನಿಗಳ ಮೂಲಕ ಅಗತ್ಯ ಸಲಕರಣೆಗಳನ್ನು ಒದಗಿಸಲು ಅನುಕೂಲ ಮಾಡಿಕೊಡುತ್ತದೆ. ಕಾಫಿಯ ಮೌಲ್ಯವನ್ನು ಹೆಚ್ಚಿಸಿದರೆ ಲಾಭ ಹೆಚ್ಚಾಗುತ್ತದೆ ಎಂದರು.


ಇದನ್ನೂ ಓದಿ; ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ; ಇಲ್ಲಿದೆ ನೋಡಿ ಡಿಟೈಲ್ಸ್


ಬಾಳೆಹೊನ್ನೂರಿನಲ್ಲಿ ಕಾಫಿ ಕೌಶಲ ಅಭಿವೃದ್ಧಿ ಕೇಂದ್ರ:
ಕಾಫಿ ಅಭಿವೃದ್ಧಿಗಾಗಿ ಸ್ಟಾರ್ಟಪ್‌ಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಬಾಳೆಹೊನ್ನೂರಿನಲ್ಲಿ ಕಾಫಿ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಅಗತ್ಯ ಅನುದಾನ ನೀಡಲು ಕೇಂದ್ರ ಬದ್ಧವಾಗಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.


ಇದನ್ನೂ ಓದಿ; ಇಂಡಿಯನ್‌ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ ನಲ್ಲಿ ಜಾಬ್; ಅರ್ಜಿ ಸಲ್ಲಿಸುವ ಡೆರೆಕ್ಟ್‌ ಲಿಂಕ್‌ ಇಲ್ಲಿದೆ


ಕಾಫಿ ಬೆಳೆಗಾರರಿಗೆ ಸಹಾಯಧನಕ್ಕಾಗಿ 100 ಕೋಟಿ ರೂ. ಹೆಚ್ಚುವರಿ ಅನುದಾನ:
ಕಾಫಿ ಬೆಳೆಗಾರರಿಗೆ ಸಹಾಯಧನ ನೀಡಲು 100 ಕೋಟಿ ರೂ. ಹೆಚ್ಚುವರಿ ಅನುದಾನದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು. ಈಗಾಗಲೇ ಸಲ್ಲಿಕೆಯಾಗಿರುವ 21,000 ಅರ್ಜಿಗಳಿಗೆ ಸಹಾಯಧನ ನೀಡಲಾಗುವುದು ಎಂದು ಗೋಯಲ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ; ಬೆಳೆವಿಮೆ ನೋಂದಣಿ ಕುರಿತು ಬಿಗ್‌ ಅಪ್ಡೇಟ್‌; ರೈತರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.