
ಚಿಕ್ಕಮಗಳೂರು: ( ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನಲ್ಲಿ ಗೂಡ್ಸ್ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಗೂಡ್ಸ್ ವಾಹನ ಭಾನುವಾರ ಸಂಜೆ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ವಾಹನದಲ್ಲಿದ್ದ ಹಲವು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

















