ಎನ್.ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ)ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಾಡಾನೆ 4 ದಿನದಲ್ಲಿ ಇಬ್ಬರನ್ನ ಬಲಿ ಪಡೆದಿತ್ತು. ಬಾಳೆಹೊನ್ನೂರು-ಖಾಂಡ್ಯ ಬಂದ್ ಮಾಡಿ ಜನ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಗಂಟೆಗಟ್ಟಲೇ ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಜನರ ಆಕ್ರೋಶಕ್ಕೆ ಮಣಿದ ಸರ್ಕಾರ ಪ್ರತಿಭಟನೆ ನಡೆಯುತ್ತಿರುವಾಗಲೇ ಸ್ಥಳಕ್ಕೆ ಶಿವಮೊಗ್ಗದ ಸಕ್ರೆಬೈಲಿನಿಂದ 4 ಕುಮ್ಕಿ ಆನೆಗಳನ್ನ ಕರೆಸಿ ಒಂದು ಕಾಡಾನೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ರು. ಇದಾದ ಬಳಿಕ ಮತ್ತೊಂದು ಆನೆ ಸೆರೆ ಹಿಡಿಯಲು ಅನುಮತಿಗೆ ಮನವಿ ಸಲ್ಲಿಸಲಾಗಿತ್ತು
ಇದೀಗ ನರಸಿಂಹರಾಜಪುರ ವಲಯ ಅರಣ್ಯ ವ್ಯಾಪ್ತಿಯ ದ್ವಾರಮಕ್ಕಿ, ಕೋಟೇಬೈಲು, ಗುಡ್ಡದಮನೆ, ಮಳಲಿ, ನೇರಲೇಕೊಪ್ಪ ಹಾಲಂದೂರು, ಗಾಂಧಿಗ್ರಾಮ, ಬಣಗಿ ಮತ್ತು ಮಡಬೂರು ಗ್ರಾಮಗಳಲ್ಲಿ ರೈತರ ಆಸ್ತಿಗಳನ್ನು ನಷ್ಟ ಉಂಟು ಮಾಡುತ್ತಿರುವ ಹಾಗೂ ಸಾರ್ವಜನಿಕರ ಜೀವಕ್ಕೆ ತೊಂದರೆ ನೀಡುತ್ತಿರುವ ಇನ್ನೊಂದು ಒಂಟಿ ಸಲಗ ಸೆರೆ ಹಿಡಿಲು ಅನುಮತಿ ದೊರೆತಿದೆ.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












