
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಬಸ್ ಚಾಲಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆತ ಕಡೂರು ಡಿಪೋದಲ್ಲಿ ನಡೆದಿದೆ. ಚಂದ್ರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಸ್ ಚಾಲಕ
ಇದನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ

ರಜೆ ವಿಚಾರವಾಗಿ ಮೇಲಾಧಿಕಾರಿ ನೀಡುತ್ತಿರುವ ಕಿರುಕುಳಕ್ಕೆ ಬೇಸತ್ತು ಕಡೂರು ಡಿಪೋದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಚಂದ್ರು ನನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ
ಚಾಲಕ ಬರೆದಿಟ್ಟ ಡೆತ್ ನೋಟಲ್ಲಿ ‘ಹುಷಾರಿಲ್ಲದೆ ಕೆಲಸಕ್ಕೆ ಬಾರದಿದ್ದಕ್ಕೆ ಹಾಜರಾತಿಯಲ್ಲಿ ಗೈರು ಹಾಕಿದ್ದಾರೆ, ನನ್ನ ಖಾತೆಯಲ್ಲಿ ಸಾಕಷ್ಟು ರಜೆ ಇದೆ, ಆದರೂ ಗೈರು ಹಾಕಿದ್ದಾರೆ, ಹಣ ಕೊಟ್ಟರೆ ಎಷ್ಟು ದಿನ ಬೇಕಾದ್ರು ರಜೆ ನೀಡುತ್ತಾರೆ. ಪುಟ್ಟಸ್ವಾಮಿಯಿಂದ ನೌಕರರ ಮೇಲಾಗುತ್ತಿರುವ ದೌರ್ಜನ್ಯ ಸರಿಪಡಿಸುವಂತೆ ಮನವಿ ಮಾಡಿದ್ದಾನೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ













