ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಬಸ್ ಪಲ್ಟಿಯಾಗಿ ಎಂಟು ಮಂದಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಗ್ರಾಮದ ಸಮೀಪ ನಡೆದಿದೆ.
ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ

ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್, ಮಾರ್ಗ ಮಧ್ಯೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ನೆರವಿನಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್ !












