ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಆಂಬುಲೆನ್ಸ್ ವಾಹನದ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ರಮೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಆಂಬುಲೆನ್ಸ್ ವಾಹನದ ಚಾಲಕ.
ಇದನ್ನೂ ಓದಿ; ಕರ್ನಾಟಕದ ಕೆಲವು ಭಾಗದಲ್ಲಿ ಭಾರಿ ಮಳೆ ಸಾಧ್ಯತೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ನಗುಮಗು ಆಂಬುಲೆನ್ಸ್ ವಾಹನದ ಸೇವೆಯ ಚಾಲಕ ವೃತ್ತಿ ಮಾಡಿಕೊಂಡು ಬೆಟ್ಟಮಕ್ಕಿಯಲ್ಲಿ ವಾಸವಾಗಿದ್ದ ರಮೇಶ್, ತನ್ನ ಬಾಡಿಗೆ ಮನೆಯಲ್ಲಿ ಮಂಗಳವಾರ ರಾತ್ರಿ ನೇಣಿಗೆ ಶರಣಾಗಿದ್ದು, ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದ ರಮೇಶ್ ನೂರಾರು ಜನರ ಜೀವವನ್ನು ಉಳಿಸಿದ್ದರು.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-17.10.2023
ಇನ್ನು ರಮೇಶ್ ಸಾವಿಗೆ ಜೆಸಿ ಆಸ್ಪತ್ರೆಯ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.
ಚಿಕ್ಕಮಗಳೂರು: ವಿಷ ಸೇವಿಸಿ ಅನುಮಾನಾಸ್ಪದ ವ್ಯಕ್ತಿ ಸಾವು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ವಿಷ ಸೇವಿಸಿ ಅನುಮಾನಾಸ್ಪದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.
ಮೂಡಿಗೆರೆಯ ಗಂಗನ ಮಕ್ಕಿಯ ಪೆಟ್ರೋಲ್ ಬಂಕ್ ಸಮೀಪ ವಿಷ ಸೇವಿಸಿ ಅನುಮಾನಾಸ್ಪದ ವ್ಯಕ್ತಿ ಸಾವನ್ನಪ್ಪಿದ್ದು, ಆತನ ಶವ ಮೂಡಿಗೆರೆ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.
ಇನ್ನು ಈತನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













