ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ-ಮಾನವ ಸಂಘರ್ಷ ತಡೆಗೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ವಿಭಾಗದಲ್ಲಿ ಶೃಂಗೇರಿ-ಕೊಪ್ಪ ಆನೆ ಕಾರ್ಯಪಡೆ ಕಾರ್ಯಗತಗೊಳಿಸಲು ಸರ್ಕಾರ ಆದೇಶ ಜಾರಿ ಮಾಡಿದೆ.
ಇದನ್ನೂ ಓದಿ: ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್ನ್ಯೂಸ್: ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಇತ್ತೀಚಿಗೆ ಮಲೆನಾಡು ಭಾಗದಲ್ಲಿ ಕಾಡಾನೆ ಉಪಟಳ ಮೀತಿ ಮೀರಿದ್ದು, ಕಾಡಾನೆ ದಾಳಿಯಿಂದ ಸಾಲು ಸಾಲು ಪ್ರಾಣಹಾನಿ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಜನಾಕ್ರೋಶ ವ್ಯಕ್ತವಾಗಿತ್ತು. ಜನರ ಮನವಿಗೆ ಸ್ಪಂದಿಸಿದ ಶಾಸಕ ಟಿ.ಡಿ ರಾಜೇಗೌಡ, ಸರ್ಕಾರದ ಗಮನವನ್ನ ಸೆಳೆಯುವಲ್ಲಿ ಸಫಲರಾಗಿದ್ದು, ಕೂಡಲೇ ಕೊಪ್ಪ ವಿಭಾಗದಲ್ಲಿ ಆನೆ ಕಾರ್ಯಪಡೆ ಕಾರ್ಯಗತಗೊಳಿಸುವಂತೆ ಸರ್ಕಾರ ಆದೇಶ ಮಾಡಿದೆ.
ಆನೆ ಕಾರ್ಯಪಡೆ ಅನುಷ್ಠಾನಗೊಳ್ಳುವುದರಿಂದ ಹೆಚ್ಚಿನ ಅರಣ್ಯ ಸಿಬ್ಬಂದಿ, ಹೆಚ್ಚಿನ ಸಲಕರಣೆಗಳು, ಹೆಚ್ಚಿನ ಸಂಪನ್ಮೂಲ ಲಭ್ಯವಾಗಲಿದ್ದು, ಕಾಡಾನೆ-ಮಾನವ ಸಂಘರ್ಷಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಬ್ರೇಕ್ ಬೀಳುವ ಸಾಧ್ಯತೆಗಳಿವೆ.
ಇದನ್ನೂ ಓದಿ: ಕೆನರಾ ಬ್ಯಾಂಕ್ನಿಂದ 30 ದಿನದ ಉಚಿತ ಹೊಲಿಗೆ ತರಬೇತಿ; ಡಿಟೇಲ್ಸ್ಗಾಗಿ ಜಸ್ಟ್ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಕೊಪ್ಪ ವಿಭಾಗದ ಚಿಕ್ಕ ಅಗ್ರಹಾರ ವಲಯ ವ್ಯಾಪ್ತಿಯ ಸಾರ್ಯಾದಿಂದ ಕರ್ಕೂಟ ಪ್ರದೇಶದ 2.81 ಕಿಲೋ ವ್ಯಾಪ್ತಿಯಲ್ಲಿ ರೇಲ್ವೇ ಬ್ಯಾರಿಕೇಡ್ ನಿರ್ಮಾಣಕ್ಕೆ ಅಂದಾಜು 4 ಕೋಟಿ, 69 ಲಕ್ಷದ 40 ಸಾವಿರ, ಬೆಳ್ಳಂಗಿಯಿಂದ ಕೊಳೆಹಳ್ಳ ಪ್ರದೇಶದ 2.23 ಕಿಲೋಮೀಟರ್ ವ್ಯಾಪ್ತಿಗೆ 3 ಕೋಟಿ 76 ಲಕ್ಷದ 40 ಸಾವಿರ ಹಾಗೂ ಕೊಳ್ಳೇಹಳ್ಳದಿಂದ ಕರ್ಕೂಟ ಪ್ರದೇಶದ ಕಿಲೋಮೀಟರ್ ವ್ಯಾಪ್ತಿಗೆ ರೇಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 4 ಕೋಟಿ 31 ಲಕ್ಷದ 70 ಸಾವಿರ ಅನುದಾನ ಹೊರಡಿಸಿ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಒಟ್ಟು 7.61 ಕಿಲೋ ವ್ಯಾಪ್ತಿ ರೇಲ್ವೆ ಬ್ಯಾರಿಕೇಡ್ ನಿರ್ಮಿಸಲು 12 ಕೋಟಿ 78 ಲಕ್ಷ ಹಣ ಮಂಜೂರು ಮಾಡಲು ಸರ್ಕಾರ ಮುಂದಾಗಿದೆ.












