ಬೀರೂರು: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆ ಕಡಿಮೆ ಇಲ್ಲದಂತೆ ಮಾಡಬೇಕೆಂದು ಶೃಂಗೇರಿ ಬಿಆರ್‌ಸಿ ಗಂಗಾಧರಪ್ಪ ಹೇಳಿದರು.
ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ!; ಸರ್ಕಾರದಿಂದ ಮಹತ್ವದ ಸುದ್ದಿ

ಬಿ. ಹೆಚ್. ರಸ್ತೆಯ ಪಿಎಂ ಶ್ರೀ ಸರ್ಕಾರಿ ಹಿರಿಯ ಬಾಲಕರ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಶಾಲಾ ವಸಂತ ವೈಭವ ಮತ್ತು ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು, ಕೇಂದ್ರ ಸರ್ಕಾರದ ಪಿಎಂ ಶ್ರೀಯೋಜನೆಯನ್ನು ಶಾಲೆಯ ಬೋಧಕ ವರ್ಗ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಬೇಕು ಎಂದರು.

ಅಳಿವಿನಂಚಿನಲ್ಲಿರುವ ಸರ್ಕಾರಿ ಶಾಲೆಗಳನ್ನು ಪುನಶ್ವೇತನಗೊಳಿಸುವ ಉದ್ದೇಶದಿಂದ ಶಿಕ್ಷಕ ವರ್ಗ, ಎಸ್‌ಡಿಎಂಸಿ, ಹಳೇ ವಿದ್ಯಾರ್ಥಿಗಳ ಸಂಘ, ಪಾಲಕರು ಶ್ರಮಿಸಿ ಮಕ್ಕಳ ದಾಖಲಾತಿ, ಎಲ್.ಕೆ.ಜಿ, ಯು.ಕೆ.ಜಿ ಆರಂಭ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆ ಹಾಗೂ ವಿದ್ಯಾರ್ಥಿಗಳಿಗೆ ಮನಸೆಳೆವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಿ ಪಿಎಂ ಶ್ರೀ ಯೋಜನೆಗೂ ಆಯ್ಕೆಯಾಗುವಂತಾಗಿರುವುದು ಶ್ಲಾಘನೀಯ ಎಂದರು.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…
ಈ ಯೋಜನೆಯಿಂದ ಬಿಡುಗಡೆಯಾಗುವ ಅನುದಾನವನ್ನು ಸರಿಯಾಗಿ ಬಳಸಿಕೊಂಡು ಶಾಲೆಯನ್ನು ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆ ಕಡಿಮೆ ಇಲ್ಲದಂತೆ ಮಾಡಬೇಕು. ಇದಕ್ಕಾಗಿ ಶಾಲೆಗೆ ನಮ್ಮ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಚಂದ್ರಶೇಖರ್, ಬಿಆರ್‌ಸಿ ವೈಶಾಲಿ ಅಡಿಗ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೇವರಮನೆ ಗಿರೀಶ್, ಕಾರ್ಯದರ್ಶಿ ಗುರುಪ್ರಸಾದ್, ಶಿಕ್ಷಕಿ ಸೌಭಾಗ್ಯಮ್ಮ, ಉಪಾಧ್ಯಕ್ಷೆ ಪೂರ್ಣಿಮಾ, ಎಸ್‌ಡಿಎಂಸಿ ಸದಸ್ಯರಾದ ಶಬ್ಬಿರ್ ಅಹಮ್ಮದ್, ಆಕಿರ್ ಇದ್ದರು.
ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ













