ಚಿಕ್ಕಮಗಳೂರು: ಡೆತ್‌ನೋಟ್‌ ಬರೆದಿಟ್ಟು ಗ್ರಾ.ಪಂ ನೀರುಗಂಟಿ ಆತ್ಮಹತ್ಯೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಡೆತ್‌ನೋಟ್‌ ಬರೆದಿಟ್ಟು ಗ್ರಾಮ ಪಂಚಾಯಿತಿಯ ನೀರುಗಂಟಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ನಡೆದಿದೆ. ಆಣೂರು ಗ್ರಾಮ ಪಂಚಾಯಿತಿಯ ನೀರುಗಂಟಿ ರಮೇಶ್(47) ನೇಣಿಗೆ ಶರಣಾದ ವ್ಯಕ್ತಿ.


ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ


ಡೆತ್‌ನೋಟ್​ನಲ್ಲಿ ಏನಿದೆ?
ನಾನು ತುಂಬಾ ವರ್ಷದಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನನಗೆ 11 ತಿಂಗಳ ವೇತನ ಕೊಟ್ಟಿಲ್ಲ. ಹಾಗೂ ಸಂಘದವರು ಮನೆಗೆ ಬಂದು ಹಣ ಕಟ್ಟುವಂತೆ ನನಗೆ ಮತ್ತು ನಮ್ಮ ಮನೆಯವರಿಗೆ ತೊಂದರೆ ಕೊಡುತ್ತಿದ್ದಾರೆ. ಹಾಗಾಗಿ ನನಗೆ ತುಂಬಾ ಮನಸ್ಸಿಗೆ ಬೇಜಾರಾಗಿದೆ.

ಫೈನಾನ್ಸ್‌ನಲ್ಲಿ ಸಾಲ ಮಾಡಿರುವೆ, ಸಂಬಳ ನೀಡದಿದ್ದಕ್ಕೆ ಸಾಲಕಟ್ಟಲು ಆಗುತ್ತಿಲ್ಲ. RBL, SKS, ಗ್ರಾಮಿಣಕೂಟ, ಮುತ್ತೂಟ್ ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಮನೆಯವರಿಗೂ ಕಿರುಕುಳ ನೀಡುತ್ತಿದ್ದಾರೆ. ಇನ್ನು ಗ್ರಾಮ ಪಂಚಾಯಿತಿ ಕಚೇರಿಯಲ್ಲೂ ಕೆಲವರು ಕೆಲಸ ಮಾಡಲು ಬಿಡುತ್ತಿಲ್ಲವೆಂದು ಅವರ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ: ಮಾ.18 ರಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ


ಈ ಕುರಿತು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.