ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಭಾರತೀ ತೀರ್ಥ ಮಹಾಸನ್ನಿಧಾನಂಗಳವರ ಸನ್ಯಾಸ ಸ್ವೀಕರಿಸಿ 50ನೇ ವರ್ಷ ಪೂರ್ಣಗೊಂಡ ಸುವರ್ಣ ಭಾರತೀ ಮಹೋತ್ಸವದ ಸುಸಂದರ್ಭದಲ್ಲಿ ಲೋಕಕ್ಷೇಮಾರ್ಥವಾಗಿ ಅನೇಕ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳು ಮತ್ತು ವಿಶೇಷವಾದ ಶಾಂಕರ ಸ್ತೋತ್ರ ಪಠಣಗಳು ಮುಂತಾದ ಅನೇಕ ಕಾರ್ಯಕ್ರಮಗಳನ್ನು ಅತ್ಯಂತ ವೈಭವೋಪೇತವಾಗಿ ವರ್ಷಪೂರ್ತಿ ಆಚರಣೆ ಮಾಡಲಾಗುತ್ತಿದೆ.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಜಾಬ್ ಆಫರ್; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ

ಪ್ರಸ್ತುತ ಉಭಯ ಜಗದ್ಗುರುಗಳವರ ಅಪ್ಪಣೆಯಂತೆ ಶ್ರೀ ಮಠದ ಶ್ರೀ ಶಾಂಕರ ತತ್ವಪ್ರಸಾರ ಅಭಿಯಾನ ಮತ್ತು ವೇದಾಂತ ಭಾರತೀ ಸಂಸ್ಥೆಗಳು ಶ್ರೀ ಶಂಕರಾಚಾರ್ಯರು ರಚಿಸಿದ ಕಲ್ಯಾಣ ವೃಷ್ಟಿಸ್ತವ, ಶಿವ ಪಂಚಾಕ್ಷರ ನಕ್ಷತ್ರಮಾಲಾ ಸ್ತೋತ್ರ ಮತ್ತು ಶ್ರೀ ಲಕ್ಷ್ಮೀ ನೃಸಿಂಹ ಕರಾವಲಂಬ ಸ್ತೋತ್ರಗಳ ವಿಶೇಷ ಅಭಿಯಾನವನ್ನು ಕೈಗೊಂಡಿದ್ದು, ಇದರ ಮಹಾಸಮರ್ಪಣೆಯನ್ನು 11.01.2025ರ ಶನಿವಾರದಂದು ಶೃಂಗೇರಿ ಕ್ಷೇತ್ರದಲ್ಲಿ ಶ್ರೀ ಮಠದಲ್ಲಿ ಆಯೋಜಿಸಲಾಗಿದೆ.


ಸಮಾಜದ ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸಿಕೊಂಡು ಎಲ್ಲಾ ವರ್ಗದವರ ಶ್ರೇಯಸ್ಸಿಗಾಗಿ ಈ ಅಭ್ಯಾಸ ವರ್ಗ ಹಮ್ಮಿಕೊಳ್ಳಲಾಗಿದೆ ಎಂದು ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಶ್ರೀ ಮಠದ ಆಡಳಿತಾಧಿಕಾರಿಗಳಾದ ಪಿ. ಎ ಮುರಳಿ ಅವರು ತಿಳಿಸಿದರು
ಇದನ್ನೂ ಓದಿ: ಈ ಯೋಜನೆಯಲ್ಲಿ ಶೇ. 60% ರಷ್ಟು ಸಹಾಯಧನ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಸಮಸ್ತ ಆಸ್ತಿಕರು ಈ ಸ್ತೋತ್ರಗಳನ್ನು ಅಭ್ಯಾಸಮಾಡಿ ಈ ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಶಂಕರ ಭಗವತ್ಪಾದರ ಹಾಗೂ ಉಭಯ ಜಗದ್ಗುರುಗಳವರ ಕೃಪೆಗೆ ಪಾತ್ರರಾಗಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಶ್ರೀ ಮಠದ ಉಮೇಶ್ ಹರಿಹರ ಅವರು ಕಾರ್ಯಕ್ರಮದ ತಯಾರಿಯ ಕುರಿತು ಮಾಹಿತಿ ಹಂಚಿಕೊಂಡರು.

ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಸುಮಾರು 50,000 ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಸುಮಾರು 3,000 ಸ್ವಯಂಸೇವಕರು ಕಾರ್ಯ ನಿರ್ವಹಣೆ ಮಾಡಲಿದ್ದಾರೆ, 500 ಬಸ್’ಗಳ ವ್ಯವಸ್ಥೆ ಮಾಡಲಾಗಿದ್ದು, 20 ಎಕರೆ ಜಾಗದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ.
ಇದನ್ನೂ ಓದಿ: SBI ಯಲ್ಲಿ ಜಾಬ್ ಆಫರ್; 17,900 ಸಂಬಳ, ವಿದ್ಯಾರ್ಹತೆ, ಅರ್ಜಿ ಲಿಂಕ್ ಇಲ್ಲಿದೆ
250 ಉಪಹಾರ ಮತ್ತು ಊಟದ ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು, ಆಗಮಿಸಿದ ಭಕ್ತಾದಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ 10.30ರಿಂದ 1.30ರ ವರೆಗೆ ಸ್ತೋತ್ರ ಪಠಣೆ ಕಾರ್ಯಕ್ರಮ ಹಾಗೂ ಗುರುಗಳ ಅನುಗ್ರಹ ಬಾಷಣ ಇರಲಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ಭಾಗವಹಿಸುವ ನಿರೀಕ್ಷೆ ಇದೆ.

ಶಿವಗಂಗಾ, ನೆಲಮಾವು ಮಠ, ಹಳದಿಪುರ ಮಠ, ಕರ್ಕಿ ಮಠ, ಆನೆಗುಂದಿ ಸರಸ್ವತಿ ಮಠ, ಸೇರಿದಂತೆ ಹಲವು ಮಠಾಧೀಶರು ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ: ಇ-ಖಾತೆ ಪಡೆಯುವವರ ಗಮನಕ್ಕೆ; ಬಿಗ್ ಅಪ್ಡೇಟ್ ಇಲ್ಲಿದೆ ನೋಡಿ













