ಹರಿಹರಪುರ: (ನ್ಯೂಸ್ ಮಲ್ನಾಡ್ ವರದಿ) ದಿವ್ಯಕ್ಷೇತ್ರ ಹರಿಹರಪುರ ಮಠದಲ್ಲಿನ ಶಾರದಾ ಪರಮೇಶ್ವರಿ ದೇವಿಗೆ ಲೋಕ ಕಲ್ಯಾಣಾರ್ಥವಾಗಿ ಋಕ್ ಸಂಹಿತಾ ಮಹಾಭಿಷೇಕವನ್ನು ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ನೆರವೇರಿಸಿದರು.
ಇದನ್ನೂ ಓದಿ; UPSC ಇಂದ ನೇಮಕ ಅಧಿಸೂಚನೆ; 122 ವಿವಿಧ ಪೋಸ್ಟ್ ಗಳ ನೇಮಕ

ಶ್ರೀಮಠ ಹರಿಹರಪುರದ ಪರಮಪೂಜ್ಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳವರು, ಇತ್ತೀಚಿಗೆ ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಂಡ ರಾಮಮಂದಿರದ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದರ ನಿಮಿತ್ತವಾಗಿ ಅಯೋಧ್ಯೆ – ಕಾಶಿ ತೀರ್ಥ ಸಮಾರಾಧನೆಯನ್ನು ಕೂಡ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಹರಿಹರಪುರದಲ್ಲಿ ಸಾಂಗವಾಗಿ ನೆರವೇರಿಸಿದರು.


ಇದನ್ನೂ ಓದಿ; ರಾಜ್ಯದ ರೈತರ ಗಮನಕ್ಕೆ; ಗ್ರಾಮ ಪಂಚಾಯಿತಿಗಳಲ್ಲಿ ಬರ ಪರಿಹಾರ ಪಟ್ಟಿ ಪ್ರಕಟ
ಭಕ್ತರು ಕಾರ್ಯಕ್ರಮದಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿ ದೇವರ ಪ್ರಸಾದ ಪಡೆದರು.
ಎನ್.ಆರ್.ಪುರ: ವಿದ್ಯುತ್ ಇಲ್ಲದೆ ಬೀದಿ ದೀಪದ ಕೆಳಗೆ ವಸತಿ ಶಾಲೆಯ ಮಕ್ಕಳ ಓದು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವಸತಿ ಶಾಲೆಯಲ್ಲಿ ವಿದ್ಯುತ್ ಇಲ್ಲದೆ ಸೋಲಾರ್ ಬೀದಿ ದೀಪದ ಕೆಳಗೆ ಮಕ್ಕಳು ಓದುವಂತಹ ಪರಿಸ್ಥಿತಿಗೆ ಬಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕೈಮರದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯ ವಸತಿ ಶಾಲೆಯಲ್ಲಿ ನಡೆದಿದೆ.
ಇದನ್ನೂ ಓದಿ; KOF ನಲ್ಲಿ ನೇಮಕಾತಿಗಾಗಿ; ಲೆಕ್ಕಪರಿಶೋಧಕರ ಭರ್ತಿಗೆ ಅರ್ಜಿ ಆಹ್ವಾನ
ಸರ್ಕಾರ ಲೋಡ್ ಶೆಡ್ಡಿಂಗ್ ಹೆಸರಲ್ಲಿ ಕರೆಂಟ್ ತೆಗೆಯುತ್ತಿರುವ ಕಾರಣ ವಸತಿ ಶಾಲೆಯ ಮಕ್ಕಳು ಸಂಜೆ ವೇಳೆ ಶಾಲೆ ಕಟ್ಟಡದಿಂದ ಹೊರಬಂದು ಕಾಂಪೌಂಡ್ ಒಳಗೆ ಬೀದಿ ದೀಪದ ಸೋಲಾರ್ ವಿದ್ಯುತ್ ಕೆಳಗೆ ಓದುತ್ತಿದ್ದಾರೆ. ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರಾಗಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರ ಆಡಳಿತದ ವ್ಯಾಪ್ತಿಗೆ ಸೇರುವ ಎನ್.ಆರ್.ಪುರ ತಾಲೂಕು ಅಷ್ಟೇ ಅಲ್ಲದೆ ಇಂಧನ ಸಚಿವರೇ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಮಕ್ಕಳು ಬೀದಿ ದೀಪದ ಕೆಳಗೆ ಓದುವ ಪರಿಸ್ಥಿತಿ ಬಂದಿದೆ. ಈ ಕುರಿತು ಸ್ಥಳೀಯರು ಅಸಮಾಧಾನ ಹೊರಹಾಕಿದ್ದು, ಹೆಣ್ಣು ಮಕ್ಕಳು ಇರುವ ವಸತಿ ಶಾಲೆ ಸರ್ಕಾರ ಕೂಡಲೇ ವಸತಿ ಶಾಲೆಗೆ ಯುಪಿಎಸ್ ಅಳವಡಿಸಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ; ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗುವವರಿಗೆ ಗುಡ್ ನ್ಯೂಸ್; ಕೆಲವೇ ತಿಂಗಳಲ್ಲಿ ಕೇಬಲ್ ಸೇತುವೆ ಸಿದ್ದ
ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಹೆಂಡದಲ್ಲಿ ತೇಲಿಸುತ್ತಿದೆ: ಆರಗ ಜ್ಞಾನೇಂದ್ರ
ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದ ಹಳ್ಳಿ ಹಳ್ಳಿಗಳಲ್ಲಿ ಹೆಂಡ ತುಂಬಿಕೊಂಡು ಬಂದು ಮನೆಗಳಿಗೆ ಹೆಂಡ ಸರಬರಾಜು ಮಾಡಲಾಗುತ್ತಿದೆ. ಅಬಕಾರಿ ಇಲಾಖೆ, ಪೋಲೀಸ್ ಇಲಾಖೆ ರಾಜ್ಯದಲ್ಲಿ ಇದೆಯೇ ಇಲ್ಲವೋ ಎಂಬ ಅನುಮಾನ ಮೂಡುತ್ತಿದೆ ಎಂದು ಮಾಜಿ ಗೃಹ ಸಚಿವ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿಧಾನ ಸಭೆ ಅಧಿವೇಶನದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಆಡಳಿತದಲ್ಲಿ ಅಕ್ರಮ ಮದ್ಯಮಾರಾಟ ಹೆಚ್ಚಾಗಿದ್ದು, ಹಳ್ಳಿಗಳ ಕೌಟುಂಬಿಕ- ಆರ್ಥಿಕ ವ್ಯವಸ್ಥೆ ಹಾಳಾಗುತ್ತಿದೆ. ಚಕ್ಕುಲಿ, ಕೋಡುಬಳೆ, ಮೀನು ಮಾರಿದಂತೆ ಹೆಂಡ ಸೇಲ್ ಮಾಡಲಾಗುತ್ತಿದೆ. ಹೆಂಡ ತುಂಬಿಕೊಂಡು ಬಂದು ಹಳ್ಳಿಗಳ ಗೂಡಂಗಡಿ, ಮನೆಗಳಿಗೆ ಸರಬರಾಜು ಮಾಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಹೆಂಡದಲ್ಲಿ ತೇಲಿಸುತ್ತಿದೆ ಎಂದು ಮಾಜಿ ಗೃಹ ಸಚಿವ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿಧಾನ ಸಭೆ ಅಧಿವೇಶನದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಆರಗ ಜ್ಞಾನೇಂದ್ರ ಅವರ ಮಾತಿಗೆ ಪ್ರತಿಕ್ರಿಯಿಸಿದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಅಕ್ರಮಗಳಿಗೆ ಹಳ್ಳಿಯ ವ್ಯಾಪಾರಿಗಳನ್ನು ಹೊಣೆ ಮಾಡುವುದಕ್ಕಿಂತ ಅಲ್ಲಿನ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಹೊಣೆ ಮಾಡಬೇಕು ಎಂದರು.















