ಹರ್ಷ ಮೇಲ್ವಿನ್ ಲಸ್ರಾದೋ ಅವರಿಗೆ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನ

ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ.


ನ್ನೂ ಓದಿ: ಅನಧಿಕೃತ ಕಟ್ಟಡ ಕಟ್ಟಿದ್ದವರಿಗೆ ಬಿಗ್ ಶಾಕ್; ಯಾಕೆ ಗೊತ್ತಾ? ಇಲ್ಲಿದೆ ನೋಡಿ


ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಖ್ಫ್ ಇಲಾಖೆಯ ಉಪ ಕಾರ್ಯದರ್ಶಿ ಎಂ. ಜ್ಯೋತಿ ಪ್ರಕಾಶ್ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಈ ನೇಮಕ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಆ ಮಹತ್ವದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.


ನ್ನೂ ಓದಿ: ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆಗೆ ಅವಕಾಶ


ಹರ್ಷ ಮೇಲ್ವಿನ್ ಲಸ್ರಾದೋ ಅವರು ಹಿರಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದು, ಹಲವು ವರ್ಷಗಳಿಂದ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಕೆ.ಪಿ.ಸಿ.ಸಿ.ಯ ವಿವಿಧ ಹುದ್ದೆಗಳಲ್ಲಿ ಅವರು ಕಾರ್ಯನಿರ್ವಹಿಸಿದ್ದು, ತಮ್ಮ ನಿಷ್ಠೆ ಮತ್ತು ಶ್ರದ್ಧೆಯಿಂದ ಪಕ್ಷದ ಬಲಿಷ್ಠ ಬೆಂಬಲಿಗರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ನಿಗಮದ ನಿರ್ದೇಶಕ ಸ್ಥಾನಕ್ಕೆ ನೇಮಕ ಮಾಡಲಾಗಿದೆ. (ವರದಿ- ತನು ಕೊಟ್ಟಿಗೆಹಾರ)


ನ್ನೂ ಓದಿ: ಚಾಕೋಲೆಟ್ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಚಾಕೋಲೆಟ್ ನಲ್ಲಿ ಆಲ್ಕೋಹಾಲ್ ಅಂಶ ಪತ್ತೆ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.