ಹಾಸನ: (ನ್ಯೂಸ್ ಮಲ್ನಾಡ್ ವರದಿ) ಹೊಳೆನರಸೀಪುರದ ನರ್ಸಿಂಗ್ ಕಾಲೇಜಿನಲ್ಲಿ ಬುಗಿಲೆದಿದ್ದ ವಿದ್ಯಾರ್ಥಿಗಳ ಗಡ್ಡ ವಿವಾದ ಸುಖಾಂತ್ಯ ಕಂಡಿದೆ. ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ್ದು, ನಿಯಮಗಳನ್ನು ಪಾಲಿಸಲು ವಿದ್ಯಾರ್ಥಿಗಳು ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ

ಏನಿದು ವಿವಾದ:
ಹಾಸನ ಜಿಲ್ಲೆಯ ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿಗಳು ತಮಗೆ ಗಡ್ಡ ತೆಗೆಯುವಂತೆ ಆಡಳಿತ ಮಂಡಳಿ ತಮಗೆ ಸೂಚನೆ ನೀಡಿದೆ. ಗಡ್ಡ ಬಿಟ್ಟುಕೊಂಡು ಬಂದ್ರೆ ಕಾಲೇಜು ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ ಎಂದು 13ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ಟ್ವೀಟ್ ಮೂಲಕ ಕಾಲೇಜು ಆಡಳಿತ ಮಂಡಳಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಈ ವಿಚಾರವಾಗಿ ಕಾಲೇಜು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು.

ಪ್ರಾಂಶುಪಾಲರಿಂದ ಸ್ಪಷ್ಟನೆ:
ಹೊಳೆನರಸೀಪುರದಲ್ಲಿ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಅವರು ಪ್ರತಿಕ್ರಿಯಿಸಿದ್ದು, ನರ್ಸಿಂಗ್ ಕೋರ್ಸ್ ಆಗಿರುವುದರಿಂದ ಕ್ಲಿನಕಲ್ ಲ್ಯಾಬ್ನಲ್ಲಿ ಗಡ್ಡ ಬಿಟ್ಟುಕೊಂಡು ಭಾಗವಹಿಸಿದರೆ ಸಮಸ್ಯೆಯಾಗುತ್ತದೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯುವಂತೆ ಹೇಳಿದ್ದೇವೆ. ಕೇವಲ ಮುಸ್ಲಿಂ ಯುವಕರಿಗೆ ಮಾತ್ರ ಗಡ್ಡ ತೆಗೆಯುವಂತೆ ಹೇಳಿಲ್ಲ.
ಇದನ್ನೂ ಓದಿ; ವಿದ್ಯಾರ್ಥಿಗಳ ಖಾತೆಗೆ 50,000 ಸ್ಕಾಲರ್ ಶಿಪ್; ಈ ಸ್ಟೆಪ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ
ನಮ್ಮ ಕಾಲೇಜಿನಲ್ಲಿ ಜಮ್ಮು-ಕಾಶ್ಮೀರದ 13 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರು ಕಾಲೇಜಿಗೆ ಸರಿಯಾಗಿ ಬರುತ್ತಿರಲಿಲ್ಲ. ಗಡ್ಡ ಬಿಟ್ಟುಕೊಂಡು, ಕೊಳೆಯಾದ ಬಟ್ಟೆ ತೊಟ್ಟುಕೊಂಡು ಬರುತ್ತಿದ್ದರು. ಶೂ ಬದಲು ಚಪ್ಪಲಿ ಹಾಕಿಕೊಂಡು ವಿಚಿತ್ರವಾಗಿ ಬರುತ್ತಿದ್ದರು. ಹೀಗಾಗಿ, ಕ್ಲಿನಿಕಲ್ ಇನ್ಸ್ಟ್ರಕ್ಟರ್ ವಿಜಯಕುಮಾರ್ ಈ 13 ವಿದ್ಯಾರ್ಥಿಗಳಿಗೆ ಗಡ್ಡ ತೆಗೆದು, ಚಪ್ಪಲಿ ಹಾಕಿಕೊಂಡು ಸರಿಯಾಗಿ ಬನ್ನಿ ಎಂದು ಮೂರು ದಿನ ಸೂಚನೆ ನೀಡಿದರೂ ವಿದ್ಯಾರ್ಥಿಗಳು ಮಾತು ಕೇಳುತ್ತಿರಲಿಲ್ಲ.
ನಮ್ಮ ಕಾಲೇಜಿನ ನಿಯಮದ ಪ್ರಕಾರ, ಶಿಸ್ತಿಗೆ ಮೊದಲ ಆದ್ಯತೆ ನೀಡಲಾಗಿದೆ. ಕ್ಲಿನಿಕಲ್ ಲ್ಯಾಬ್ಗೆ ಎಂಟು ಗಂಟೆಗೆ ಬರುವ ಬದಲು 10-11 ಗಂಟೆಗೆ ಬೇಕಾಬಿಟ್ಟಿ ಬರುತ್ತಿದ್ದರು. ಅಲ್ಲದೇ ವಿದ್ಯಾರ್ಥಿಗಳ ಹಾಜರಾತಿ ಈ ಕಡಿಮೆ ಇದೆ. ಇದೆಲ್ಲವನ್ನು ಪ್ರಶ್ನಿಸಿದಾಗ ಮತ್ತು ಗಡ್ಡ ತೆಗೆಯುವಂತೆ ಹೇಳಿದ್ದಕ್ಕೆ, ತಮ್ಮ ತಪ್ಪು ಮುಚ್ಚಿಕೊಳ್ಳಲು ವಿಷಯವನ್ನು ಬೇರೆ ತರ ತಿರುಚಿದ್ದಾರೆ. ಈ ವಿವಾದವನ್ನು ಸೃಷ್ಟಿಸಿದ್ದಾರೆ ಎಂದರು.
ಇದನ್ನೂ ಓದಿ; ಆಧಾರ್ ಕಾರ್ಡ್ ಇದ್ದವರಿಗೆ ಹೊಸ ಆದೇಶ; ಏನದು? ಇಲ್ಲಿದೆ ನೋಡಿ
ಕೊನೆಗೂ ಮುಸ್ಲಿಂ ವಿದ್ಯಾರ್ಥಿಗಳ ಗಡ್ಡ ವಿವಾದ ಸುಖಾಂತ್ಯ:
ವಿದ್ಯಾರ್ಥಿಗಳ ಗಡ್ಡ ವಿವಾದ ಕೊನೆಗೂ ಸುಖಾಂತ್ಯ ಕಂಡಿದೆ. ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ್ದು, ನಿಯಮಗಳನ್ನು ಪಾಲಿಸಲು ವಿದ್ಯಾರ್ಥಿಗಳು ಒಪ್ಪಿಕೊಂಡಿದ್ದಾರೆ.
ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಸೂಚನೆಯಂತೆ ನಡೆದುಕೊಳ್ಳುತ್ತೇವೆ. ಕಾಲೇಜು ನಿಯಮದಂತೆ ಶಿಸ್ತಿನಿಂದ ಇರಬೇಕೆಂದು ಹೇಳಿದರು. ಮುಂದೆ ನಿಮ್ಮ ವಿದ್ಯಾಭ್ಯಾಸಕ್ಕೆ ತೊಂದರೆ ಆಗುವುದಿಲ್ಲ ಎಂದಿದ್ದಾರೆ. ಈ ವಿಷಯವನ್ನು ಇಲ್ಲಿಗೆ ಕೈ ಬಿಡುತ್ತಿದ್ದೇವೆ ಎಂದರು.
ಇದನ್ನೂ ಓದಿ; ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಈರುಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ!, ಎಷ್ಟಿದೆ ನೋಡಿ
ಗಡ್ಡ ತೆಗೆಯಬೇಕೆಂಬ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿಬಂದಿರುವ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಮೇಲೆ ಯಾರೂ ಒತ್ತಡ ಹೇರಿಲ್ಲ. ಶಿಸ್ತಿನ ವಿಚಾರದಲ್ಲಿ ಗಡ್ಡ ಟ್ರಿಮ್ ಮಾಡಲು ಹೇಳಿದ್ದರು. ಗಡ್ಡದ ವಿಚಾರ ಬಿಟ್ಟರೆ ಬೇರೆ ಏನೂ ಸಮಸ್ಯೆ ಆಗಿಲ್ಲ. ತಾರತಮ್ಯ ಮಾಡಿರುವ ಬಗ್ಗೆ ಯಾವುದೇ ವಿಚಾರ ಇಲ್ಲ. ಈಗ ಸಮಸ್ಯೆ ಬಗೆ ಹರಿದಿದೆ, ಏನೂ ಸಮಸ್ಯೆ ಇಲ್ಲ. ನಮ್ಮ ಸಂಪ್ರದಾಯ ಪಾಲನೆಗೆ ಅಡ್ಡಿ ಇಲ್ಲ ಎಂದು ಜಮ್ಮು-ಕಾಶ್ಮೀರದಿಂದ ಬಂದಿರುವ ಮುಸ್ಲಿಂ ವಿದ್ಯಾರ್ಥಿ ಉಮರ್ ತಿಳಿಸಿದರು.












