ಉಡುಪಿ/ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿ ಪೊಲೀಸ್ ಠಾಣೆ ಮುಖ್ಯ ಪೇದೆ ವಿಜಯಕುಮಾರ್ ನಾಯ್ಕ(41) ಶನಿವಾರ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಆಧಾರ್ & ರೇಷನ್ ಕಾರ್ಡ್ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ

ಬುಧವಾರ ಉಡುಪಿಗೆ ಬಂದಿದ್ದು, ಗುರುವಾರ ಕರ್ತವ್ಯದಲ್ಲಿದ್ದಾಗ ಬೆಳಗ್ಗೆ 10ರ ಸಮಯದಲ್ಲಿ ಅವರಿಗೆ ತೀವ್ರ ವಾಂತಿಯಾಗಿದ್ದು, ಉಸಿರಾಟದ ಸಮಸ್ಯೆ ಉಂಟಾಗಿತ್ತು. ಹೀಗಾಗಿ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಶನಿವಾರ ಸಂಜೆ ಮೃತಪಟ್ಟಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ












