ಕಡೂರು: (ನ್ಯೂಸ್ ಮಲ್ನಾಡ್ ವರದಿ) ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ವಾಹನಗಳು ನಜ್ಜುಗುಜ್ಜಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಚ್ಚೇರಿ ಬಳಿಯ ನಾಯಿಸಾಡ್ಲಿ ಸೇತುವೆ ಬಳಿ ಸೋಮವಾರ ನಡೆದಿದೆ.
ಇದನ್ನೂ ಓದಿ: ಈ ನಿಯಮಗಳನ್ನು ಪಾಲಿಸದಿದ್ದರೆ ರೇಷನ್ ಕಾರ್ಡ್ ರದ್ದು

ಕಡೂರು ಕಡೆಯಿಂದ ತೆರಳುತ್ತಿದ್ದ ಕಾರು ನಾಯಿಸಾಡ್ಲಿ ತಿರುವಿನಲ್ಲಿ ಎದುರಿಗೆ ಬಂದ ಟ್ರ್ಯಾಕ್ಟರ್ಗೆ ಡಿಕ್ಕಿಯಾಗಿದೆ. ಟ್ರ್ಯಾಕ್ಟರ್ ಚಾಲಕ ವಿನಯ್ ಆಶ್ಚರ್ಯಕರ ರೀತಿಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಟ್ರಾಕ್ಟರ್ನ ದೊಡ್ಡಚಕ್ರಗಳು ಮುರಿದು ಹೋಗಿವೆ.
ಇದನ್ನೂ ಓದಿ: 6 ಜಿಲ್ಲೆಗಳಲ್ಲಿ ಪ್ರಧಾನಿ ಧನಧಾನ್ಯ ಯೋಜನೆ ಜಾರಿ
ರಸ್ತೆ ಬದಿಯಲ್ಲಿ ಜಲಜೀವನ್ ಯೋಜನೆಯ ಪೈಪ್ಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ. ಅಪಘಾತ ನಡೆದ ಸ್ಥಳದಲ್ಲಿ ಕಾಮಗಾರಿ ಕೆಲಸ ಮುಗಿದಿದ್ದರೂ ಅಲ್ಲಿ ಮಣ್ಣನ್ನು ಹಾಗೆಯೇ ಬಿಡಲಾಗಿದ್ದು, ಇದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಇಲ್ಲಿನ ತಿರುವುಗಳಲ್ಲಿ ದಟ್ಟವಾಗಿ ಗಿಡಗಂಟಿಗಳು ಬೆಳೆದಿದ್ದು, ಎದುರಿನಿಂದ ಬರುವ ವಾಹನಗಳು ಕಾಣದಿರುವುದರಿಂದ ಅಪಘಾತಗಳು ಹೆಚ್ಚುತ್ತಿವೆ. ಸಂಬಂಧಿಸಿದ ಅಧಿಕಾರಿಗಳು ಗಿಡಗಂಟಿಗಳ ತೆರವು ಕಾರ್ಯಾಚರಣೆ ನಡೆಸುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: 18,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ; ಇಲ್ಲಿದೆ ಡಿಟೈಲ್ಸ್












