ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವಪ್ಪಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಬಳಿ ನಡೆದಿದೆ. ಕುಮಾರಪ್ಪ (69) ಸತೀಶ್ (35) ಮೃತ ದುರ್ದೈವಿಗಳು.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಮೃತರಿಬ್ಬರು ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ ಮೂಲದವರು ಎಂದು ತಿಳಿದುಬಂದಿದೆ. ಹಿರೇಗೌಜ ಗ್ರಾಮದ ತಿರುವಿನಲ್ಲಿ ಘಟನೆ ನಡೆದಿದೆ. ಆಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮತ್ತೋರ್ವರ ಸ್ಥಿತಿ ಗಂಭೀರವಾಗಿದೆ. ಗಂಭೀರ ಗಾಯಗೊಂಡ ಚಾಲಕನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












