ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಚಟ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಖಾಸಗಿ ಕಂಪನಿಯ ಕೋರಿಯರ್ ಸಾಗಿಸುತ್ತಿದ್ದ ಗೂಡ್ಸ್ ವಾಹನವು ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಪಾಲಾಕ್ಷ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನ ಪಲ್ಟಿಯಾಗಿದ್ದು, ಗಾಯಾಳುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













