
ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ದಾರಿಯಾದ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಮುಂಜಾನೆ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಶೋಗೆ ಫೈನಲ್ ಆದ 18 ಸ್ಪರ್ಧಿಗಳು ಇವರೇ?

ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಎದುರಿಗೆ ಬಂದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಡಿಕ್ಕಿಯಿಂದ ಎರಡೂ ಕಾರುಗಳು ಭಾರೀ ಹಾನಿಗೊಳಗಾಗಿವೆ. ಅಪಘಾತದ ನಂತರ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದರೂ, ಸ್ಥಳೀಯರ ಸಹಕಾರದಿಂದ ವಾಹನ ಸಂಚಾರವನ್ನು ಸುಗಮ ಮಾಡಲಾಯಿತು.

ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ ತೆರವಿಗೆ SIT ರಚಿಸಿ ಆದೇಶ













