ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ರಾಷ್ಟ್ರೀಯ ಹೆದ್ದಾರಿ ರಾಮಣ್ಣನ ಗಂಡಿ ಬಳಿ ನಡೆದಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ, ಎರಡು ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಸ್ಥಳೀಯರು ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)















