
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಆಡಳಿತ ಸೌಧದ ಸುತ್ತಮುತ್ತ ಪ್ಲಾಸ್ಟಿಕ್ ಗಳ ಕಸದ ರಾಶಿಗಳು ತುಂಬಿ ಹೋಗಿದ್ದು, ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಾ ಹಾಗೆ ಕಾಣುತ್ತಿದೆ.
ಇದನ್ನೂ ಓದಿ: ಮನೆಗೆ ಜೈವಿಕ ಅನಿಲ ಘಟಕ ಸೇರಿದಂತೆ ಸಬ್ಸಿಡಿ; ಯಾರಿಗೆ ಸಬ್ಸಿಡಿ? ಎಷ್ಟು ಸಹಾಯಧನ?

ನೂರಾರು ಜನರು ದಿನಂಪ್ರತಿ ತಮ್ಮ ಕೆಲಸಗಳಿಗೆ ತಾಲೂಕು ಕಚೇರಿಗೆ ಆಗಮಿಸುತ್ತಾರೆ. ಅಲ್ಲಿದ್ದ ಅಧಿಕಾರಿಗಳು ಮಾತ್ರ ಅವರ ಕೆಲಸವಾಯಿತು ಅವರಾಯಿತು ಅನ್ನುವ ಹಾಗೆ ಇದ್ದು, ಕಚೇರಿ ಸುತ್ತಮುತ್ತ ಮಾತ್ರ ಗಬ್ಬು ಎಬ್ಬಿಸಿಟ್ಟಿದ್ದಾರೆ ಎಂದು ಹಸಿರು ಫೌಂಡೇಶನ್ ಅಧ್ಯಕ್ಷ ರತನ್ ಊರುಬಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಟೆಸ್ಲಾ ಪ್ರಿಯರಿಗೆ ಬಂಪರ್ ಸುದ್ದಿ; ಭಾರತಕ್ಕೆ ಬರುತ್ತಿದೆ ಎರಡು ಹೊಸ ಕಾರುಗಳು, ಮಾರಾಟ ಯಾವಾಗ?
ತಾಲೂಕು ಕಚೇರಿ ಸುತ್ತಮುತ್ತಲಿನ ಪ್ರದೇಶ ಶುಚಿಗೊಳಿಸದೇ ಹಾಗೆ ಬಿಟ್ಟಿರುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಪ್ಲಾಸ್ಟಿಕ್ ಹಾಗೂ ಕಸದ ರಾಶಿಯನ್ನು ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)













