
ಉಡುಪಿ/ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ವೇಷ ಕಳಚುವ ಮುನ್ನವೇ ಯಕ್ಷಗಾನ ಕಲಾವಿದ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈಶ್ವರ ಗೌಡ ಹೃದಯಾಘಾತಕ್ಕೆ ಬಲಿಯಾದ ಯಕ್ಷಗಾನ ಕಲಾವಿದ.
ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಜಿಬಿಎ ಗುಡ್ನ್ಯೂಸ್; ಮಧ್ಯವರ್ತಿಗಳ ಹಾವಳಿ ಸೇರಿ ಭ್ರಷ್ಟಾಚಾರಕ್ಕೂ ಬ್ರೇಕ್

ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿಯಾಗಿದ್ದ ಈಶ್ವರ ಗೌಡ ಅವರು ಮಂದಾರ್ತಿ 2ನೇ ಮೇಳದ ಪ್ರತಿಭಾನ್ವಿತ ಕಲಾವಿದ. ಬುಧವಾರ ರಾತ್ರಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ ವೇಷ ಕಳಚುವ ಮುನ್ನವೇ ಬಣ್ಣದ ಮನೆಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯೆ ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ: PM ಕಿಸಾನ್ ಯೋಜನೆಯಿಂದ 35 ಲಕ್ಷ ರೈತರ ಹೆಸರು ಡಿಲೀಟ್













