ಹಾಸನ: (ನ್ಯೂಸ್ ಮಲ್ನಾಡ್ ವರದಿ) ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಪೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಈ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್

ದೊಡ್ಡತಪ್ಪೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
ಕಳೆದ 15 ದಿನಗಳಿಂದ ಮಣ್ಣು ಕುಸಿಯುತ್ತಿದ್ದು ಇಂದು (ಮಂಗಳವಾರ) ಮತ್ತೆ ಮಣ್ಣು ಕುಸಿದಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲಿದ್ದು, ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಮಣ್ಣು ತೆರವು ಮಾಡುತ್ತಿದ್ದಾರೆ.
ಇದನ್ನೂ ಓದಿ: ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
ಸದ್ಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ.
ಇದನ್ನೂ ಓದಿ: 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ












