ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಇಂದಿನಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಅದರ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!

ಹವಾಮಾನ ಇಲಾಖೆ ಕಾಫಿನಾಡಿಗೆ ಇಂದು (ಗುರುವಾರ) ಆರೆಂಜ್ ಅಲರ್ಟ್, ನಾಳೆ-ನಾಡಿದ್ದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ. ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದೆ.
ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ
ಸಾರ್ವಜನಿಕರ ಸುರಕ್ಷತೆಗಾಗಿ ಜಿಲ್ಲಾಡಳಿತ ಕಂಟ್ರೋಲ್ ರೂಂ ತೆರೆದಿದ್ದು ಅಗತ್ಯ ಬಿದ್ದರೆ ಕರೆ ಮಾಡುವಂತೆ ಸೂಚನೆ ನೀಡಿದೆ, ಜೊತೆಗೆ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಜನರು ಹಳ್ಳ, ನದಿ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಜೊತೆಗೆ ಜಾನುವಾರು, ಬಟ್ಟೆ ತೊಳೆಯಲು ಹಳ್ಳ-ಕೆರೆಕಟ್ಟೆ ಬಳಿ ಹೋಗದಂತೆ ಸೂಚನೆ ನೀಡಿದೆ. ಧರೆ, ಗುಡ್ಡ ಕುಸಿಯುವ ಸಾಧ್ಯತೆಯಿದ್ದು ಜನರು ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಿದೆ.
ಇದನ್ನೂ ಓದಿ: ಮನೆ, ಆಫೀಸ್, ಅಂಗಡಿಯ ವಿದ್ಯುತ್ ಮೀಟರ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಂಧನ ಸಚಿವ













