ಆಗುಂಬೆ: (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸುವಂತೆ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!

ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರು ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರೀಯ ಹದ್ಮಾರಿ 169ಎ ತೀರ್ಥಹಳ್ಳಿ- ಮಲ್ಪೆ ರಸ್ತೆಯ ಆಗುಂಬೆ ಘಾಟೆಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ 15-06-2025 ರಿಂದ 30-09-2025 ರವರೆಗೆ ಸದರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸಿದೆ.

ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ; 15,000 ಸಂಬಳ
ಈ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ:
ಉಡುಪಿ-ತೀರ್ಥಹಳ್ಳಿಗೆ ಸಂಚರಿಸುವಂತ ಭಾರಿ ವಾಹನಗಳು ಉಡುಪಿ-ಕುಂದಾಪುರ ಸಿದ್ಯಾಪುರ ಮಾಸ್ತಿಕಟ್ಟೆ-ತೀರ್ಥಹಳ್ಳಿಗೆ ತೆರಳುವಂತೆ ಸೂಚಿಸಲಾಗಿದೆ.
ಉಡುಪಿ-ತೀರ್ಥಹಳ್ಳಿಗೆ ಉಡುಪಿ-ಕಾರ್ಕಳ-ಮಾಳ ಘಾಟೆ-ಶೃಂಗೇರಿ-ತೀರ್ಥಹಳ್ಳಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಿಳಿಸಲಾಗಿದೆ.
ಇದನ್ನೂ ಓದಿ: ಶೃಂಗೇರಿ ರೈತರ ಗಮನಕ್ಕೆ; ವಿವಿಧ ಯೋಜನೆಯಡಿಯಲ್ಲಿ ಸಿಗಲಿದೆ ಸಹಾಯಧನ













