
ಶೃಂಗೇರಿ- ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ನಲ್ಲಿ ಗುಡ್ಡ ಕುಸಿತವಾಗುತ್ತಿರುವ ಕಾರಣ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ರಾಷ್ಟ್ರೀಯ ಹೆದ್ದಾರಿ 169ನಲ್ಲಿ ಕಿ.ಮೀ 123.80 ರಿಂದ ಕಿ.ಮೀ 141.00 ರವರೆಗೆ ಅಂದರೆ ತನಿಕೋಡಿನಿಂದ ಎಸ್.ಕೆ.ಬಾರ್ಡರ್ ವರೆಗೆ 30.09.2025ರ ವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಬದಲಿ ಮಾರ್ಗ ಅನುಸರಿಸುವಂತೆ ಸೂಚನೆ:
* ಚಿಕ್ಕಮಗಳೂರಿನಿಂದ ಬರುವ ಭಾರಿ ವಾಹನಗಳು ಬಾಳೆಹೊನ್ನೂರು-ಮಾಗುಂಡಿ-ಕಳಸ-ಕುದುರೆಮುಖ-ಎಸ್.ಕೆ.ಬಾರ್ಡರ್ ಮಾರ್ಗವಾಗಿ ಸಂಚರಿಸುವುದು.
* ನರಸಿಂಹರಾಜಪುರ ಕಡೆಯಿಂದ ಬರುವ ಭಾರಿ ವಾಹನಗಳು ಬಾಳೆಹೊನ್ನೂರು-ಮಾಗುಂಡಿ-ಕಳಸ-ಕುದುರೆಮುಖ-ಎಸ್.ಕೆ.ಬಾರ್ಡರ್ ಮಾರ್ಗವಾಗಿ ಸಂಚರಿಸುವುದು.
* ಕೊಪ್ಪ ಕಡೆಯಿಂದ ಬರುವ ಭಾರಿ ವಾಹನಗಳು ಕೊಪ್ಪ-ಜಯಪುರ- ಬಾಳೆಹೊನ್ನೂರು-ಮಾಗುಂಡಿ-ಕಳಸ-ಕುದುರೆಮುಖ- ಎಸ್.ಕೆ.ಬಾರ್ಡರ್ ಮಾರ್ಗವಾಗಿ ಸಂಚರಿಸಲು ಸೂಚಿಸಿದೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ













