ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸುಮಾರು 25ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆನೆಗಳ ಹಿಂಡು ನೋಡಿ ಕೆಲ ಹೊತ್ತು ರಸ್ತೆ ಪಕ್ಕದಲ್ಲಿಯೇ ವಾಹನವನ್ನು ನಿಲ್ಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಹೌದು, ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಅಂಚಿನಲ್ಲಿ ಮತ್ತೆ ಕಾಡಾನೆಗಳ ಸಂಚಾರ ಹೆಚ್ಚಾಗಿದೆ. ಮುತ್ತೋಡಿ ಬಳಿ ರಸ್ತೆಗಳಲ್ಲಿ 25ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಓಡಾಡುತ್ತಿರುವುದು ಸ್ಥಳೀಯರಲ್ಲಿ ಭೀತಿಯನ್ನು ಉಂಟುಮಾಡಿದೆ.
ಕಾಡಾನೆಗಳು ಭತ್ತ, ಅಡಿಕೆ ಸೇರಿದಂತೆ ಪ್ರಮುಖ ಬೆಳೆಗಳನ್ನು ನಿರಂತರವಾಗಿ ನಾಶ ಪಡಿಸುತ್ತಿದ್ದು, ರೈತರು ಸಂಕಟಕ್ಕೀಡಾಗಿದ್ದಾರೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ, ಶೀರ್ಲು, ಕೆರೆಗದ್ದೆ, ಅಣಲಕ್ಕಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾಡಾನೆಗಳು ದಾಳಿ ನಡೆಸಿದ ಕಾರಣ ನಿನ್ನೆ ಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದರು. ಜೊತೆಗೆ ಪ್ರತಿಭಟನೆಯಲ್ಲಿ ರೈತ ಮಹಿಳೆಯೊಬ್ಬರು ಬೆಳೆ ನಾಶವಾಗಿರುವ ಬಗ್ಗೆ ಕಣ್ಣೀರು ಹಾಕಿದರು. ಕಳೆದೊಂದು ತಿಂಗಳ ಹಿಂದೆ ಕೆರೆಗದ್ದೆ ಗ್ರಾಮದಲ್ಲಿ ಇಬ್ಬರು ಗ್ರಾಮಸ್ಥರು ಕಾಡಾನೆ ಬಲಿಯಾಗಿದ್ದ ಹಿನ್ನೆಲೆಯಲ್ಲಿ ಈಗ ಗ್ರಾಮಸ್ಥರ ಭಯ ಮತ್ತಷ್ಟು ಹೆಚ್ಚಾಗಿದೆ.
Source: tv9kannada
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ












