
ಫೆಬ್ರವರಿ 22ರಂದು ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆ ಬೋರಮ್ಮ ಸಾವನ್ನಪ್ಪಿದ ದುರ್ಘಟನೆ ಬಳಿಕ ಉಂಟಾದ ಪ್ರತಿಭಟನೆ ಪ್ರಕರಣದಲ್ಲಿ ಮತ್ತೆ 9 ಜನ ರೈತ ಹೋರಾಟಗಾರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಇದೀಗ ಈ ಪ್ರಕರಣದ ಸಂಬಂಧ ಯಾವುದೇ ಕ್ರಮ ಕೈಗೊಳ್ಳಬಾರದು ಹಾಗೂ ಬಂಧನ ಮಾಡಬಾರದು ಎಂದು ಹೈಕೋರ್ಟ್ ಆದೇಶ ನೀಡಿದೆ.
ಇದನ್ನೂ ಓದಿ: ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್: ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಹೌದು, ಕಾಡಾನೆ ತುಳಿತದಿಂದ ಮೃತಪಟ್ಟ ಬೋರಮ್ಮ ಅವರ ಶವವನ್ನು ಕಡಬಗೆರೆಯಲ್ಲಿ ತಡೆದು, ಪರಿಹಾರ ಹಾಗೂ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಬೆಳಗ್ಗಿನಿಂದ ಸಂಜೆವರೆಗೂ ನಡೆದ ಈ ಪ್ರತಿಭಟನೆ ವೇಳೆ ಹೆದ್ದಾರಿ ಬಂದ್, ಶವ ಸಾಗಣೆಗೆ ಅಡ್ಡಿ, ಪೊಲೀಸರ ಮೇಲೆ ಕಲ್ಲು ತೂರಾಟ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಾಳೆಹೊನ್ನೂರು ಠಾಣೆಯಲ್ಲಿ ಮೊದಲ ಹಂತದಲ್ಲಿ 9 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ರೈತರು ಮತ್ತು ಬೆಳೆಗಾರರೊಂದಿಗೆ ಸಭೆ ನಡೆಸಿ, ರೈತರ ಮೇಲಿನ ಕೇಸ್‌ಗಳನ್ನು ಹಿಂಪಡೆಯುವುದಾಗಿ ಭರವಸೆ ನೀಡಿದ್ದರು. ಆದರೆ, ಸಭೆ ನಡೆಸಿ ಹೋದ ಬಳಿಕ ಎಫ್ ಐ ಆರ್ ಗೆ 9 ಜನರನ್ನು ಹೆಚ್ಚುವರಿ ಸೇರ್ಪಡೆ ಮಾಡಲಾಗಿತ್ತು. ಈ ಪ್ರಕರಣದ ಸಂಬಂಧ ಇದೀಗ ಯಾವುದೇ ಕ್ರಮ ಕೈಗೊಳ್ಳಬಾರದು ಹಾಗೂ ಬಂಧನ ಮಾಡಬಾರದು ಎಂದು ಹೈಕೋರ್ಟ್ ಆದೇಶ ನೀಡಿದೆ.

ಇದನ್ನೂ ಓದಿ: ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೊಲಿಗೆ ತರಬೇತಿ; ಡಿಟೇಲ್ಸ್‌ಗಾಗಿ ಜಸ್ಟ್ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಈ ಪ್ರಕರನದ ಕುರಿತು ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡನೆ ಮಾಡಿದ್ದಾರೆ.













