ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ ಮೂರು ವರ್ಷಗಳ ಹಿಂದೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಎದುರು ಕಾಂಗ್ರೆಸ್ ಅಭ್ಯರ್ಥಿ ಎ.ವಿ.ಗಾಯತ್ರಿ ಶಾಂತೇಗೌಡ ಕೇವಲ 6 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ನಂತರ ಎ.ವಿ.ಗಾಯತ್ರಿ ಶಾಂತೇಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ 30 ದಿನಗಳ ಒಳಗೆ ಮರು ಮತ ಎಣಿಕೆ ನಡೆಸುವಂತೆ ಆದೇಶಿಸಿದೆ.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?

ವಿಧಾನ ಪರಿಷತ್ ಚುನಾವಣೆ ಫಲಿತಾಂಶದಿಂದ ಅಸಮಾಧಾನಗೊಂಡ ಎ.ವಿ.ಗಾಯತ್ರಿ ಶಾಂತೇಗೌಡ ಸರ್ಕಾರದ 12 ಜನ ನಾಮ ನಿರ್ದೇಶಕರ ಮತದಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಬುಧವಾರ ರಾಜ್ಯ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಈ 12 ಮತಗಳನ್ನು ಹೊರತುಪಡಿಸಿ ಮಾ.7ರ ಒಳಗೆ ಮರು ಮತ ಎಣಿಕೆ ಮಾಡಿ ವರದಿ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ; ಇ-ಖಾತಾ ಇಲ್ಲದವರಿಗೆ ಬಿ-ಖಾತಾ ವಿತರಣೆ\
ಇನ್ನು ಮತಗಳ ಮರು ಎಣಿಕೆ ನಂತರ ಎಂ.ಕೆ.ಪ್ರಾಣೇಶ್ ಅವರಿಗೆ ಹಿನ್ನಡೆಯಾದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಪಿಯುಸಿ ಪಾಸ್ ಆದ ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್; ಎಷ್ಟು ಸ್ಕಾಲರ್ಶಿಪ್ ಲಭ್ಯ, ಅರ್ಜಿ ಸಲ್ಲಿಕೆ ಹೇಗೆ?












