ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನಲ್ಲಿ ರಾಸಾಯನಿಕ ಗೊಬ್ಬರಕ್ಕೆ ಹೆಚ್ಚಿನ ದರವನ್ನು ಪಡೆಯುತ್ತಿರುವ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ತಹಶೀಲ್ದಾರ್ ಮನವಿ ಪತ್ರ ಸಲ್ಲಿಸಿದರು.
ಇದನ್ನೂ ಓದಿ: ಮುಂದಿನ ತಿಂಗಳಿನಿಂದ ಇಂದಿರಾ ಆಹಾರ ಕಿಟ್ ವಿತರಣೆ

ಶೃಂಗೇರಿ ತಾಲ್ಲೂಕಿನಲ್ಲಿ ಯೂರಿಯಾ ಗೊಬ್ಬರಕ್ಕೆ ಎಮ್.ಆರ್.ಪಿ ದರವು 266.50 ರೂ ಇದ್ದು ಆದರೆ ಗೊಬ್ಬರ ಮಾರಾಟಗಾರರು 300.00 ರೂ ಗಳನ್ನು ಪಡೆಯುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರವರು 300.00 ರೂಗಳಿಗೆ ಮಾರಾಟ ಮಾಡಿ ಎಂದು ತಿಳಿಸಿರುವುದಾಗಿ ಹೇಳುತ್ತಿದ್ದಾರೆ.
ಈ ಹೆಚ್ಚಿನ ದರವು ಲಾರಿ ಬಾಡಿಗೆ ಎಂದು ಪಡೆಯುತ್ತಿದ್ದಾರೆ. ಈ ರೀತಿ ರೈತರಿಗೆ ಆಗುವ ನಷ್ಟವನ್ನು ಸೂಕ್ತ ತನಿಖೆಯ ಮೂಲಕ ಪರಿಶೀಲಿಸಿ ಕಾನೂನು ಕ್ರಮ ಕೈಗೊಂಡು ಮುಂದೆ ಈ ರೀತಿ ಆಗದಂತೆ ತಡೆದು ರೈತರಿಗೆ ನ್ಯಾಯಯುತವಾದ ಬೆಲೆಯಲ್ಲಿ ಗೊಬ್ಬರವು ದೊರೆಯುವಂತೆ ಮಾಡಬೇಕು ಹಾಗೂ ಹೆಚ್ಚಿನ ಹಣ ಪಡೆದಿದ್ದನ್ನು ವಾಪಾಸು ಕೊಡಿಸಬೇಕಾಗಿ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ತಹಶೀಲ್ದಾರ್ ಮನವಿ ಪತ್ರ ಸಲ್ಲಿಸಿದರು.
ಇದನ್ನೂ ಓದಿ: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿ ಕುರಿತು ಮಹತ್ವದ ಆದೇಶ












