ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷನೆ ಮಾಡಲಾಗಿದೆ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಗುಡ್ಡ ಕುಸಿತ:
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತವಾಗಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ವಾಹನಗಳು ಸಂಚಾರ ಮಾಡುತ್ತಿದ್ದು, ಮಳೆ ಹೆಚ್ಚಾದ್ರೆ ಒಂದು ಭಾಗದ ಗುಡ್ಡವೇ, ಕುಸಿದು ಬೀಳುವ ಆತಂಕ ಶುರುವಾಗಿದೆ.

ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ













