ಕೊಪ್ಪ/ಹರಿಹರಪುರ: ಹಿಟ್ ಅಂಡ್ ರನ್ ಪ್ರಕರಣ: ಅಪಘಾತಕ್ಕೆ ಕಾರಣವಾದ ವಾಹನ ವಶಕ್ಕೆ

ಕೊಪ್ಪ/ಹರಿಹರಪುರ: (ನ್ಯೂಸ್ ಮಲ್ನಾಡ್ ವರದಿ) ಮೇ 26ರಂದು ಕೊಪ್ಪ ತಾಲೂಕಿನ ಹೋನಗೋಡು ಸಮೀಪ ಸಂಭವಿಸಿದ್ದ ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ ಅಪಘಾತಕ್ಕೆ ಕಾರಣವಾದ ವಾಹನವನ್ನು ಕೇವಲ 36 ಗಂಟೆಗಳೊಳಗೆ ಪತ್ತೆ ಹಚ್ಚುವಲ್ಲಿ ಕೊಪ್ಪ ಪೊಲೀಸ್ ವೃತ್ತ ನಿರೀಕ್ಷಕ ಭರತ್ ಹಾಗೂ ಹರಿಹರಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಶ್ರೀಧರ್ ನಾಯ್ಕ ನೇತೃತ್ವದ ತಂಡ ಯಶಸ್ವಿಯಾಗಿದೆ.

ಅಪಘಾತದಲ್ಲಿ ಶೃಂಗೇರಿ ಸಮೀಪದ ಕಲ್ಕಟ್ಟೆ ನಿವಾಸಿ ರಫೀಕ್ (31) ಸ್ಥಳದಲ್ಲೇ ಮೃತಪಟ್ಟಿದ್ದರು. ಮೇ 26ರಂದು ಬೆಳಿಗ್ಗೆ ಸುಮಾರು 6 ಗಂಟೆ ವೇಳೆಗೆ ಹೋನಗೋಡು ಸಮೀಪ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಡಿಕ್ಕಿಯ ತೀವ್ರತೆಗೆ ರಫೀಕ್ ಸಾವನ್ನಪ್ಪಿದ್ದರು.

ಪ್ರಕರಣ ದಾಖಲಿಸಿಕೊಂಡ ಹರಿಹರಪುರ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿ, ವಿವಿಧ ತಾಂತ್ರಿಕ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆ ಹಚ್ಚಿದ್ದಾರೆ. ಸುಂದರೇಶ್  ಎಂಬುವವರಿಗೆ ಸೇರಿದ ವಾಹನವನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.